ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮುಖ್ಯಮಂತ್ರಿ ಭೇಟಿ

Update: 2018-09-07 05:57 GMT

ಉಡುಪಿ, ಸೆ.7: ಅಭವಿಜಿತ ದ.ಕ. ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನೆಗಾಗಿ ಇಂದು ಆಗಮಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಮುಖ್ಯಮಂತ್ರಿಯವರಿಗೆ ಪರ್ಯಾಯ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಕೃಷ್ಣ ದೇವರ ದರ್ಶನ ಮಾಡಿಸಿ, ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜಾತ್ಯತೀತ ಜನತಾದಳದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಇದಕ್ಕೂ ಮಂಗಳೂರಿನಿಂದ ರಸ್ತೆ ಮೂಲಕ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿಯವರನ್ನು ಹೆಜಮಾಡಿಯಲ್ಲಿ ಸ್ವಾಗತಿಸಲಾಯಿತು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವೆ ಜಯಾಮಾಲಾ, ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಅಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News