ಬೆಂಗಳೂರು: ಮಕ್ಕಳ ಕಳ್ಳನೆಂಬ ಶಂಕೆಯಲ್ಲಿ ಮಾನಸಿಕ ಅಸ್ವಸ್ಥನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದರು

Update: 2018-09-07 10:04 GMT

ಬೆಂಗಳೂರು, ಸೆ.7: ಮಕ್ಕಳ ಕಳ್ಳನೆಂಬ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿಹಾಕಿದ ಗುಂಪು ಆತನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಒಡಿಶಾದ ವ್ಯಕ್ತಿಯೊಬ್ಬನನ್ನು ನೋಡಿದ್ದ ವೈಟ್ ಫೀಲ್ಡ್ ನೆರೆಹೊರೆಯ ನಿವಾಸಿಗಳು ಆತ ಮಕ್ಕಳ ಕಳ್ಳ ಎಂದು ಶಂಕಿಸಿದ್ದರು ಎನ್ನಲಾಗಿದೆ. ಆ ವ್ಯಕ್ತಿಯನ್ನು ಮರಕ್ಕೆ ಕಟ್ಟಿಹಾಕಿದ ಗುಂಪು ಆತನಿಗೆ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಲಭಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ವ್ಯಕ್ತಿಯನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News