ಬಿಬಿಎಂಪಿ ಮೇಯರ್ ಚುನಾವಣೆ: ಸೌಮ್ಯ ಶಿವಕುಮಾರ್‌ಗೆ ಅವಕಾಶ ನೀಡಲು ಆಗ್ರಹ

Update: 2018-09-07 13:24 GMT

ಬೆಂಗಳೂರು, ಸೆ.7: ಬಿಬಿಎಂಪಿ ಮೇಯರ್ ಆಯ್ಕೆಗೆ ಸೆ.28 ರಂದು ಚುನಾವಣೆ ನಡೆಯಲಿದ್ದು, ಒಕ್ಕಲಿಗ ಸಮುದಾಯಕ್ಕೆ ಸೇರಿದ ಸೌಮ್ಯ ಶಿವಕುಮಾರ್‌ಗೆ ಅವಕಾಶ ನೀಡಬೇಕು ಎಂದು ರಾಜ್ಯ ಒಕ್ಕಲಿಗ ಒಕ್ಕೂಟ ಟ್ರಸ್ಟ್ ಆಗ್ರಹಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಸಿ.ವಿ.ದೇವರಾಜ್, ಬಿಬಿಎಂಪಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರಿಯಲಿದ್ದು, ಮೇಯರ್ ಹಾಗೂ ಉಪಮೇಯರ್ ಸ್ಥಾನವನ್ನು ಸಮಾನವಾಗಿ ಹಂಚಿಕೆ ಮಾಡಿಕೊಂಡು ಅಧಿಕಾರ ನಡೆಸಲಾಗುತ್ತಿದೆ. ಹೀಗಾಗಿ, ಶಾಂತಿನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ.117 ರಿಂದ ಅತಿ ಹೆಚ್ಚು ಮತಗಳ ಅಂತರದಿಂದ ಎರಡನೆ ಬಾರಿಗೆ ಗೆದ್ದಿರುವ ಸೌಮ್ಯ ಶಿವಕುಮಾರ್‌ಗೆ ಅವಕಾಶ ನೀಡಬೇಕು ಎಂದು ಹೇಳಿದರು.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಸೇರಿದಂತೆ ಅನೇಕರಿಗೆ ಈ ಸಂಬಂಧ ಪತ್ರದ ಮೂಲಕ ಮನವಿ ಮಾಡಲಾಗಿದೆ. ಅನೇಕ ವರ್ಷಗಳಿಂದ ಮೇಯರ್ ಸ್ಥಾನದಿಂದ ವಂಚಿತರಾಗಿರುವ ಒಕ್ಕಲಿಗ ಸಮುದಾಯಕ್ಕೆ ಈ ಬಾರಿ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News