ಸೈಕಲ್‌ ರವಿ ವಿರುದ್ಧ ಜಾರಿ ನಿರ್ದೇಶನಾಲಯ ಎಫ್‌ಐಆರ್

Update: 2018-09-07 15:10 GMT

ಬೆಂಗಳೂರು, ಸೆ.7: ನಗರದಲ್ಲಿ ಕೊಲೆ, ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಆರೋಪಿ ಸೈಕಲ್ ರವಿ ಮೇಲೆ ಜಾರಿ ನಿರ್ದೇಶನಾಲಯ ಎಫ್‌ಐಆರ್ ದಾಖಲಿಸಿದೆ.

ಅಕ್ರಮ ಆಸ್ತಿ, ಹವಾಲ ದಂಧೆಯಲ್ಲಿ ತೊಡಗಿರುವ ಸೈಕಲ್ ರವಿ ಬಗ್ಗೆ ತನಿಖೆ ಮಾಡುವಂತೆ ಸಿಸಿಬಿ ಪೊಲೀಸರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದಾಖಲೆಗಳ ಪರಿಶೀಲನೆ ಬಳಿಕ ಆರೋಪಿ ಮೇಲೆ ಜಾರಿ ನಿರ್ದೇಶನಾಲಯ ಎಫ್‌ಐಆರ್ ದಾಖಲಿಸಿದೆ. ಇನ್ನು ಸೈಕಲ್ ರವಿ ಜತೆ ರಾಜಕಾರಣಿಗಳು ಮತ್ತು ಸಿನೆಮಾ ನಟರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ಮುಂದುವರೆದಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News