ಸೆ.10 ರಂದು ಬಂದ್ ನಡೆಸದಿರಲು ಕೊಡಗು ಕಾಂಗ್ರೆಸ್ ನಿರ್ಧಾರ

Update: 2018-09-07 15:18 GMT

ಮಡಿಕೇರಿ, ಸೆ.7 : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರ ಏರಿಕೆಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿದೆ ವಿಫಲವಾಗಿದೆ ಎಂದು ಆರೋಪಿಸಿ ಸೆ.10 ರಂದು ದೇಶದಾದ್ಯಂತ ಬಂದ್ ನಡೆಸಲು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕರೆ ನೀಡಿದೆ. ಆದರೆ ಕೊಡಗು ಜಿಲ್ಲೆ ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವುದರಿಂದ ಜಿಲ್ಲೆಯಲ್ಲಿ ಬಂದ್ ನಡೆಸದೆ ಇರಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವುಮಾದಪ್ಪ ತಿಳಿಸಿದ್ದಾರೆ.

ಪ್ರಾಣ ಹಾನಿ ಮತ್ತು ಆಸ್ತಿ, ಪಾಸ್ತಿ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವವರ ನೋವಿಗೆ ಸ್ಪಂದಿಸುವಲ್ಲಿ ರಾಜಕೀಯ ರಹಿತವಾಗಿ ಕಾಂಗ್ರೆಸ್ ಪಕ್ಷ ಭಾಗಿಯಾಗಿದೆ. ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವಲ್ಲಿ ಸರಕಾರದೊಂದಿಗೆ ಸಹಕರಿಸುತ್ತಿರುವುದರಿಂದ ಕೊಡಗು ಜಿಲ್ಲೆಯ ಮಟ್ಟಿಗೆ ಬಂದ್ ನಡೆಸದೆ ಇರಲು ನಿರ್ಧರಿಸಿರುವುದಾಗಿ ಅವರು ಸ್ಪಷ್ಟ ಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ತೀವ್ರ ರೀತಿಯ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಶಿವು ಮಾದಪ್ಪ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News