×
Ad

ಮಾದಕ ವ್ಯಸನ ವಿರೋಧಿ ಮಾಸಾಚರಣೆ ಮಾಹಿತಿ ಪುಸ್ತಕ ಅನಾವರಣ

Update: 2018-09-07 21:23 IST

ಉಡುಪಿ, ಸೆ.7: ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಉಡುಪಿ ಪ್ರೆಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿ ಕೊಳ್ಳಲಾಗಿರುವ ಮಾದಕ ವ್ಯಸನ ವಿರೋಧಿ ಮಾಸಾಚರಣೆ ಕಾರ್ಯಕ್ರಮದ ಕುರಿತು ಹೊರತಂದಿರುವ ಮಾಹಿತಿ ಪುಸ್ತಕವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ಮಣಿಪಾಲದಲ್ಲಿರುವ ಉಡುಪಿ ಜಿಪಂ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ, ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಎಲ್ಲರು ಕೈಜೋಡಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News