ಅಲ್ಪಸಂಖ್ಯಾತ ಸಮುದಾಯದ ಅರ್ಥಶಾಸ್ತ್ರಜ್ಞನಿಗೆ ಖೊಕ್

Update: 2018-09-07 17:14 GMT

ಇಸ್ಲಾಮಾಬಾದ್, ಸೆ. 7: ತನ್ನ ಆರ್ಥಿಕ ಸಲಹಾ ಮಂಡಳಿಯ ಸದಸ್ಯರನ್ನಾಗಿ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದ ಖ್ಯಾತ ಅರ್ಥಶಾಸ್ತ್ರಜ್ಞ ಆತಿಫ್ ಮಿಯಾನ್‌ರನ್ನು ನೇಮಿಸಿರುವುದನ್ನು ಪಾಕಿಸ್ತಾನದ ನೂತನ ಸರಕಾರ ರದ್ದುಪಡಿಸಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದರು.

ಅಹ್ಮದಿ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರನ್ನು ಸರಕಾರದ ಉನ್ನತ ಮಂಡಳಿಗೆ ನೇಮಿಸಿರುವುದಕ್ಕೆ ದೇಶದಲ್ಲಿ ಭಾರೀ ವಿರೋಧ ವ್ಯಕ್ತವಾಗಿರುವುದನ್ನು ಸ್ಮರಿಸಬಹುದಾಗಿದೆ.

ದೇಶವನ್ನು ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಸಲಹೆಗಳನ್ನು ನೀಡುವುದಕ್ಕಾಗಿ ಪ್ರಧಾನಿ ಇಮ್ರಾನ್ ಖಾನ್ 18 ಸದಸ್ಯರ ಆರ್ಥಿಕ ಸಲಹಾ ಮಂಡಳಿಯನ್ನು ಸ್ಥಾಪಿಸಿದ್ದರು.

43 ವರ್ಷದ ಮಿಯಾನ್‌ರನ್ನು ಜಗತ್ತಿನ ಶ್ರೇಷ್ಠ ಅರ್ಥಶಾಸ್ತ್ರಜ್ಞರ ಪೈಕಿ ಒಬ್ಬರು ಎಂಬುದಾಗಿ ಪರಿಗಣಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News