7 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

Update: 2018-09-08 09:45 GMT

ಕಠ್ಮಂಡು, ಸೆ.8: ಏಳು ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರೊಂದು ಕೇಂದ್ರ ನೇಪಾಳದ ಪರ್ವತಶ್ರೇಣಿಯಲ್ಲಿ ಪತನಗೊಂಡಿರುವುದಾಗಿ ವರದಿಯಾಗಿದೆ. ಆದರೆ ಪ್ರಯಾಣಿಕರ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ.

ಜಪಾನಿ ಟ್ರೆಕ್ಕರ್ ಒಬ್ಬರು ಸೇರಿ ಆರು ಮಂದಿ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗೋರ್ಖಾದಿಂದ ಟೇಕ್ ಆಫ್ ಆದ ಕೆಲ ಸಮಯದಲ್ಲೇ ಹೆಲಿಕಾಪ್ಟರ್ ನಿಯಂತ್ರಣ ಕಳೆದುಕೊಂಡಿತು.

ಧಾಂಡಿಂಗ್ ಜಿಲ್ಲೆಯ ಪರ್ತಶ್ರೇಣಿಯಲ್ಲಿ ಹೆಲಿಕಾಪ್ಟರ್ ನ ಅವಶೇಷಗಳು ಕಂಡುಬಂದಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News