ಟಿಪ್ಪು ಜಯಂತಿ ಯಶಸ್ವಿಯಾಗಿ ಆಚರಿಸಲು ಆಗ್ರಹಿಸಿ ಮನವಿ

Update: 2018-09-08 13:08 GMT

ಮಂಗಳೂರು, ಸೆ.8: ದೇಶದ ಸ್ವಾತಂತ್ರಕ್ಕಾಗಿ ಬದುಕನ್ನೇ ತ್ಯಾಗ ಮಾಡಿದ ಟಿಪ್ಪುಸುಲ್ತಾನ್ ಜನ್ಮದಿನವನ್ನು ರಾಜ್ಯ ಸರಕಾರವು ನವೆಂಬರ್ 10ರಂದು ಆಚರಿಸುವ ಸಂದರ್ಭ ಕೆಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದೆ. ಆ ಹಿನ್ನಲೆಯಲ್ಲಿ ರಾಜ್ಯ ಸರಕಾರವು ಇದನ್ನು ಗಂಭೀರವಾಗಿ ಪರಿಗಣಿಸಿ ಟಿಪ್ಪು ಜಯಂತಿಯನ್ನು ಯಶಸ್ವಿಯಾಗಿ ಆಚರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಮಾಜಿ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯೀಲ್ ಮನವಿ ಸಲ್ಲಿಸಿದ್ದಾರೆ.

ಟಿಪ್ಪು ಸುಲ್ತಾನರ ಸಾಹಸವನ್ನು ಮೆಚ್ಚಿ ರಾಜ್ಯದಲ್ಲಿ ಸಾಹಸತ್ವ ಮೆರೆದವರಿಗೆ ಸುಲ್ತಾನ್ ಹೆಸರಲ್ಲಿ ಪ್ರಶಸ್ತಿ ನೀಡಬೇಕು. ಕನ್ನಂಬಾಡಿ ಅಣೆಕಟ್ಟು ನಿರ್ಮಾಣಕ್ಕೆ ಅಡಿಪಾಯ, ರಾಕೆಟ್ ಗುರುತಿಸುವಿಕೆ ಲಾಲ್‌ಭಾಗ್ ನಿರ್ಮಾಣ ದೇವಾಲಯಗಳಿಗೆ ದೇಣಿಗೆ ನೀಡಿದ ಸುಲ್ತಾನ್ ನಾಡಿನ ರಕ್ಷಣೆಗಾಗಿ ಕೋಟೆ ಕೊತ್ತಲಗಳನ್ನು ನಿರ್ಮಿಸಿದ್ದರು. ಟಿಪ್ಪು ಹೆಸರನ್ನು ಉಳಿಸಿಕೊಳ್ಳಲು ಪಠ್ಯಪುಸ್ತಕದಲ್ಲಿ ಚರಿತ್ರೆಯನ್ನು ಅಳವಡಿಸುವುದರೊಂದಿಗೆ ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರನ್ನು ನಾಮಕರಣ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ನಿಯೋಗದಲ್ಲಿ ಉಳ್ಳಾಲ ಕ್ಷೇತ್ರ ಕಾರ್ಯದರ್ಶಿ ರಿಯಾಝ್ ಹರೇಕಳ ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News