ಬೆಂಗಳೂರು: ಇಬ್ಬರು ಸೆಕ್ಯುರಿಟಿ ಗಾರ್ಡ್‌ಗಳು ನೇಣಿಗೆ ಶರಣು
Update: 2018-09-08 19:07 IST
ಬೆಂಗಳೂರು, ಸೆ.8: ವ್ಯಕ್ತಿಗಳಿಬ್ಬರು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯ ಎಸ್ಪಿ ಕಚೇರಿ ಸಮೀಪ ನಡೆದಿದೆ.
ಚಾಮರಾಜನಗರ ಮೂಲದ ಲಿಂಗಯ್ಯ ಹಾಗೂ ಮುಹಮ್ಮದ್ ನೇಣಿಗೆ ಶರಣಾಗಿರುವ ದುರ್ದೈವಿಗಳಾಗಿದ್ದಾರೆ. ಇವರಿಬ್ಬರು ಸೆಕ್ಯುರಿಟಿ ಗಾರ್ಡ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು, ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತನಿಖೆ ಮುಂದುವರೆಯುತ್ತಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಠಾಣಾ ಪೊಲೀಸರು ತಿಳಿಸಿದ್ದಾರೆ.