ನಡುರಸ್ತೆಯಲ್ಲಿ ಅಸಭ್ಯ ವರ್ತನೆ ಆರೋಪ: ಬಂಧನ
Update: 2018-09-08 19:08 IST
ಬೆಂಗಳೂರು, ಸೆ.8: ನಗರದ ನಡು ರಸ್ತೆಯಲ್ಲಿಯೆ ಬೆತ್ತಲೆ ನಿಂತು ಅಸಭ್ಯವಾಗಿ ವರ್ತನೆ ತೋರಿದ ಆರೋಪದಡಿ ವ್ಯಕ್ತಿಯೋರ್ವನನ್ನು ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ.
ನಗರದ ಮುಹಮ್ಮದ್ ಸಿದ್ದಿಕ್ ಬಂಧಿತ ಆರೋಪಿ. ಈತ ಆರ್‌ಟಿ ನಗರದಲ್ಲಿ ಸಂಜೆ ವೇಳೆಯಲ್ಲಿ ಕೆಲ ಮನೆಗಳಿಗೆ ಅನುಮತಿಯಿಲ್ಲದೆ ಪ್ರವೇಶಿಸಿ, ಆಯುರ್ವೇದಿಕ್ ವೈದ್ಯನೆಂದು ಪರಿಚಯಿಸಿಕೊಂಡು ಮಹಿಳೆಯರ ಎದುರು ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಹಿಳೆಯರೆ ಆರೋಪಿಯನ್ನು ಹಿಡಿದು ಹೊಯ್ಸಳ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.