×
Ad

ಭಾರತ್ ಬಂದ್‌ಗೆ ಕನ್ನಡ ಒಕ್ಕೂಟ ಬೆಂಬಲ

Update: 2018-09-08 19:11 IST

ಬೆಂಗಳೂರು, ಸೆ.8: ಡೀಸೆಲ್, ಪೆಟ್ರೋಲ್, ಗ್ಯಾಸ್ ದರದ ಹೆಚ್ಚಳ ವಿರೋಧಿಸಿ ಸೆ.10 ರಂದು ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್‌ಗೆ ಕನ್ನಡ ಒಕ್ಕೂಟವು ಬೆಂಬಲ ನೀಡಲಿದೆ ಎಂದು ಒಕ್ಕೂಟದ ಅಧ್ಯಕ್ಷ ತಿಳಿಸಿದ್ದಾರೆ.

ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರಕಾರ ಈಗಾಗಲೇ 10 ಬಾರಿ ಡೀಸೆಲ್, ಪೆಟ್ರೋಲ್, ಗ್ಯಾಸ್ ದರ ಹೆಚ್ಚಳ ಮಾಡಿದ್ದು, ಮಧ್ಯಮ ವರ್ಗದ ಜನ ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಅಲ್ಲದೆ ರಾಜ್ಯದ ಸಮ್ಮಿಶ್ರ ಸರಕಾರ ಬಸ್ ದರ ಏರಿಕೆ ಮಾಡಲು ಮುಂದಾಗಿರುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಕೆಂಪೇಗೌಡ ಬಸ್ ನಿಲ್ದಾಣದ ಹತ್ತಿರ ವಿನೂತನ ರೀತಿಯಲ್ಲಿ ಸೆ.10ರ ಸೋಮವಾರ ಬೆಳಗ್ಗೆ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News