ವಿಟಿಯು ಕ್ಯಾರಿ ಓವರ್ ಪದ್ಧತಿ ರದ್ದು ಮಾಡಲು ನಿರ್ಣಯ

Update: 2018-09-08 14:30 GMT

ಬೆಂಗಳೂರು, ಸೆ.8: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಕ್ಯಾರಿ ಓವರ್ ಪದ್ಧತಿಯನ್ನು ರದ್ದು ಮಾಡಿ, ಚಾಯ್ಸಾ ಬೇಸ್ ಕ್ರೆಡಿಟ್ ಸಿಸ್ಟಂ(ಸಿಬಿಸಿಎಸ್) ಮುಂದುವರಿಸಲು ನಿರ್ಧರಿಸಲಾಗಿದೆ.

ಕ್ಯಾರಿ ಓವರ್ ಪದ್ಧತಿ ರದ್ದು ಮಾಡಬೇಕು ಎಂದು ವಿದ್ಯಾರ್ಥಿಗಳು ತೀವ್ರ ಸ್ವರೂಪದ ಹೋರಾಟ ನಡೆಸಿದ್ದರು. ಅಲ್ಲದೆ, ಈ ವಿಷಯ ಉನ್ನತ ಶಿಕ್ಷಣ ಸಚಿವರವರೆಗೂ ತಲುಪಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ವಿಟಿಯು ಕುಲಪತಿಗೆ ಸೂಚನೆ ನೀಡಿದ್ದರು. ಹೀಗಾಗಿ, ವಿಟಿಯು ಕಾರ್ಯನಿರ್ವಾಹಕ ಸದಸ್ಯರ ಸಭೆ ಕರೆದು ವಿಚಾರ ಮಂಡಿಸಿ ವಿದ್ಯಾರ್ಥಿಗಳ ಪರವಾಗಿ ವಿಟಿಯ ಈ ನಿರ್ಣಯ ತೆಗೆದುಕೊಂಡಿದೆ. ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮುಂದುವರಿಸಲು ಅನುಕೂಲವಾಗಲಿದೆ.

ಮೊದಲ ವರ್ಷದಲ್ಲಿರುವ ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ಕೆಲ ವಿಷಯಗಳನ್ನು ಉಳಿಸಿಕೊಂಡಿದ್ದರೂ ಕ್ಯಾರಿ ಓವರ್ ಪದ್ಧತಿ ಮುಂದುವರಿಕೆಯಿಂದ ಮೂರನೇ ವರ್ಷಕ್ಕೆ ಪ್ರವೇಶ ಪಡೆಯಬಹುದು. ಆದರೆ, ನಾಲ್ಕಕ್ಕಿಂತ ಹೆಚ್ಚಿನ ವಿಷಯಗಳನ್ನು ಉಳಿಸಿಕೊಳ್ಳುವಂತಿಲ್ಲ. ಈ ಹೊಸ ನಿರ್ಣಯದಿಂದಾಗಿ ಅಂದಾಜು 7 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಿದ್ಯಾರ್ಥಿಗಳು ಮೊದಲ ವರ್ಷದಲ್ಲಿ ಅನುತ್ತೀರ್ಣರಾಗಿರುವ ಕಾರಣ ಅವರು ಮೂರನೇ ವರ್ಷಕ್ಕೆ ಪ್ರವೇಶ ಪಡೆದುಕೊಳ್ಳಲು ಅನರ್ಹರಾಗಿದ್ದರು. ಇದು 2015ರಿಂದ 2017 ಸಮಯದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಅನ್ವಯಿಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News