ಭಾರತ್ ಬಂದ್‌ಗೆ ಬೆಂಬಲ: ಅಲ್ಪಸಂಖ್ಯಾತ ಸಮಿತಿ ಮನವಿ

Update: 2018-09-08 14:33 GMT

ಕಾಪು, ಸೆ.8: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆ ಗಮನಾರ್ಹ ರೀತಿಯಲ್ಲಿ ಕಡಿಮೆಯಾದರೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೆಟ್ರೋಲ್ ಬೆಲೆಯನ್ನು ನಿರಂತರ ಏರಿಸಿರುವುದನ್ನು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಉತ್ತರ ವಲಯ ಖಂಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆದಷ್ಟು ಶೀಘ್ರವಾಗಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಇನ್ನಿತರ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಿ ಜನರ ಹೊರೆಯನ್ನು ಕಡಿತಗೊಳಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಆಗ್ರಹಿಸಿದೆ.

ಕೇಂದ್ರ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ನಡೆಯುವ ಭಾರತ ಬಂದ್‌ಗೆ ಹೆಚ್ಚಿನ ಜನ ಬೆಂಬಲ ದೊರಕುತಿತಿದ್ದು, ಭಾರತ್ ಬಂದ್‌ನ್ನು ಯಶಸ್ವಿಗೊಳಿಸಲು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉತ್ತರ ವಲಯದ ಅಧ್ಯಕ್ಷ ರಿಯಾಜ್ ಪಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಸ್ಟೀವನ್ ಕುಲಾಸೊ ಉದ್ಯಾವರ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News