ಸುಳ್ಯ ನಗರ ಪಂಚಾಯತ್: ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಸಚಿವರಿಗೆ ಮನವಿ

Update: 2018-09-08 14:56 GMT

ಸುಳ್ಯ, ಸೆ. 8: ನಗರವು ವಾಣಿಜ್ಯ, ಶೈಕ್ಷಣಿಕ ಮತ್ತು ಧಾರ್ಮಿಕ ಹಾಗೂ ಪ್ರವಾಸೀ ಕೇಂದ್ರವಾಗಿ ಶೀಘ್ರವಾಗಿ ಬೆಳೆಯುತ್ತಿದ್ದು ಈಗಾಗಲೇ ಪಟ್ಟಣ ಪಂಚಾಯತ್ ಅಸ್ತಿತ್ವದಲ್ಲಿರುತ್ತದೆ. ಜನಸಂಖ್ಯೆಯ ಆಧಾರದಲ್ಲಿ ಮೂವತ್ತು ಸಾವಿರಕ್ಕೂ ಮಿಕ್ಕಿದ ಜನಸಂಖ್ಯೆಯನ್ನು ಒಳಗೊಂಡಿದ್ದು ಪುರಸಭೆಯನ್ನಾಗಿ ಪರಿವರ್ತಿಸಿ ವಿಶೇಷ ಅನುದಾನದ ಮೂಲಕ ಅಭಿವೃದ್ಧಿಪಡಿಸಬೇಕೆಂದು ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ಸಂಶುದ್ದೀನ್‍ರವರು ನಗರಾಭಿವೃದ್ಧಿ ಹಾಗೂ ವಸತಿ ಸಚಿವರಾದ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.

ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು ಜಿಲ್ಲಾಧಿಕಾರಿಗಳ ಮುಖಾಂತರ ವರದಿ ಸಲ್ಲಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿರುತ್ತಾರೆ. ಈ ಬಗ್ಗೆ ನಗರ ಪಂಚಾಯತ್ ಜನಸಾಂದ್ರತೆ ಮತ್ತು ಕರ್ನಾಟಕ ಮುನ್ಸಿಪಲ್ 1964ರ ಅದಿ ನಿಯಮದ ಪ್ರಕಾರ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಕೂಡಲೇ ಸಲ್ಲಿಸುವಂತೆ ಮಾನ್ಯ ಜಿಲ್ಲಾಧಿಕಾರಿಯವರು ಸುಳ್ಯ ನಗರ ಪಂಚಾಯತ್‍ಗೆ ಆದೇಶಿಸಿರುತ್ತಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಯೋಜನಾ ಸಮಿತಿ ಸದಸ್ಯ ಕೆ.ಎಂ. ಮುಸ್ತಫ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News