ಸರಕಾರಿ ಶಾಲೆಗಳನ್ನು ಉಳಿಸಲು ಆಗ್ರಹ

Update: 2018-09-08 16:34 GMT

ಬೆಂಗಳೂರು, ಸೆ.8: ಸರಕಾರಿ ಶಾಲೆಗಳನ್ನು ಉಳಿಸಿ ಬಡವರ ಮಕ್ಕಳಿಗೂ ಇಂಗ್ಲಿಷ್ ಶಿಕ್ಷಣ ಕೊಡಿಸಿ ಎಂದು ಮಂಗಳೂರಿನಿಂದ ಬೆಂಗಳೂರಿಗೆ ರಥಯಾತ್ರೆ ನಡೆಸಿದ ದುರ್ಗಾ ಫ್ರೆಂಡ್ಸ್ ಕ್ಲಬ್ ಸರಕಾರವನ್ನು ಆಗ್ರಹಿಸಿದ್ದಾರೆ.

ಶನಿವಾರ ನಗರದ ಸ್ವಾತಂತ್ರ ಉದ್ಯಾನ ವನದಲ್ಲಿ ಸಮಾವೇಶಗೊಂಡ ರಥಯಾತ್ರೆಯಲ್ಲಿ ಮಾತನಾಡಿದ ಕ್ಲಬ್ ಸದಸ್ಯರು, ಒಂದೇ ದೇಶ ಒಂದೇ ಶಿಕ್ಷಣ ಪದ್ಧತಿಯೊಂದಿಗೆ ಸಮಾನ ಶಿಕ್ಷಣ ನೀತಿಯನ್ನು ಜಾರಿಗೊಳಿಸಬೇಕು. ಹಾಗೂ ಆರ್‌ಟಿಇ ಕಾಯ್ದೆಯ ಗೊಂದಲ ನಿವಾರಿಸಿ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಒತ್ತಾಯಿಸಿದರು.

ಪಠ್ಯ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸಬೇಕು. ಶಿಕ್ಷಕರ ಸಹಿತ ಎಲ್ಲ ಸರಕಾರಿ ನೌಕರರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಬೇಕೆಂಬ ಆದೇಶ ಹೊರಡಿಸಬೇಕೆಂದು ಜಾಥಾದಲ್ಲಿ ಆಗ್ರಹಿಸಿದರು.

ಸ್ವಾತಂತ್ರ ಉದ್ಯಾನ ವನದಿಂದ ವಿಧಾನಸೌಧಕ್ಕೆ ಜಾಥಾದಲ್ಲಿ ಹೋಗುತ್ತಿದ್ದಾಗ ಪ್ರತಿಭಟನಾಕಾರರನ್ನು ಪೊಲೀಸರು ಮಾರ್ಗ ಮಧ್ಯೆದಲ್ಲಿ ತಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News