ಬಾಗೇಪಲ್ಲಿ: ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ಪಿತೃ ವಿಯೋಗ

Update: 2018-09-08 18:00 GMT

ಬಾಗೇಪಲ್ಲಿ,ಸೆ.8: ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿಯವರ ತಂದೆ ನಂಜುಂಡರೆಡ್ಡಿ(80) ಶುಕ್ರವಾರ ಸಂಜೆ ಪಟ್ಟಣದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಸುಮಾರು 2 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಂಜುಂಡರೆಡ್ಡಿಯವರು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಡು ದಿನಗಳ ಹಿಂದೆ ಅಸ್ಪತ್ರೆಯಿಂದ ಮನೆಗೆ ಕರೆತರಲಾಗಿತ್ತು. ಉಸಿರಾಟದ ತೊಂದರೆಯಿಂದ ಬಳಲುತಿದ್ದ ಅವರು ಶುಕ್ರವಾರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಗೃಹ ಕಚೇರಿಯಲ್ಲಿ ನಂಜುಂಡರೆಡ್ಡಿರವರ ಪಾರ್ಥಿವ ಶರಿರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಇಂದು ಬೆಳಗ್ಗೆ ತಮ್ಮ ಸ್ವಗ್ರಾಮ ಚಿನ್ನಕಾಯಲಪಲ್ಲಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

ಮೃತರು ಪತ್ನಿ ಅದಿಲಕ್ಷ್ಮಮ್ಮ, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸೇರಿದಂತೆ ಮೂವರು ಗಂಡು ಮಕ್ಕಳು ಹಾಗೂ ಒಬ್ಬ ಪುತ್ತಿ ಸೇರಿ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಸಂಸದರಾದ ಕೆ.ಹೆಚ್.ಮುನಿಯಪ್ಪ, ವೀರಪ್ಪಮೊಯ್ಲಿ, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಚಿಕ್ಕಬಳ್ಳಾಪುರ ಶಾಸಕ ಸುಧಾಕರರೆಡ್ಡಿ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿ.ಪಂ.ಅಧ್ಯಕ್ಷ ಮಂಜುನಾಥ್ ತೊಳ್ಳಪಲ್ಲಿ ರವಿಂದ್ರರೆಡ್ಡಿ, ಡಿವೈಎಸ್‍ಪಿ ಪ್ರಭುಶಂಕರ್, ಅರೆಕೆರೆ ಕೃಷ್ಣಾರೆಡ್ಡಿ, ಮಂಜುನಾಥರೆಡ್ಡಿ ಹೇಮಚಂದ್ರ ಮತ್ತಿತರರರು ಸಂತಾಪ ಸೂಚಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News