ಕಪಿಲ್ ದೇವ್ ದಾಖಲೆ ಸರಿಗಟ್ಟಿದ ಇಶಾಂತ್ ಶರ್ಮಾ

Update: 2018-09-09 08:21 GMT

ಲಂಡನ್, ಸೆ.9: ಈಗ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಭಾರತದ ವೇಗದ ಬೌಲರ್ ಇಶಾಂತ್ ಶರ್ಮಾ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಸರಣಿಯಲ್ಲಿ ಒಟ್ಟು 18 ವಿಕೆಟ್‌ಗಳನ್ನು ಪಡೆದಿರುವ ಇಶಾಂತ್ ಅವರು ಜೇಮ್ಸ್ ಆ್ಯಂಡರ್ಸನ್(21 ವಿಕೆಟ್)ಬಳಿಕ ಸರಣಿಯಲ್ಲಿ ಗರಿಷ್ಠ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಇಶಾಂತ್ ದಿ ಓವಲ್‌ನಲ್ಲಿ ನಡೆದ ಐದನೇ ಟೆಸ್ಟ್‌ನ 2ನೆ ದಿನವಾದ ಶನಿವಾರ ಇಂಗ್ಲೆಂಡ್‌ನ ಮೊದಲ ಇನಿಂಗ್ಸ್‌ನಲ್ಲಿ 3 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಈ ವೇಳೆ ಅವರು ಕಪಿಲ್‌ದೇವ್ ನಿರ್ಮಿಸಿದ್ದ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ಕಪಿಲ್‌ದೇವ್ ಇಂಗ್ಲೆಂಡ್‌ನಲ್ಲಿ ಆಡಿರುವ 13 ಪಂದ್ಯಗಳಲ್ಲಿ(22 ಇನಿಂಗ್ಸ್) ಒಟ್ಟು 43 ವಿಕೆಟ್‌ಗಳನ್ನು ಉರುಳಿಸಿದ್ದಾರೆ.

ಇಶಾಂತ್ ಮೊದಲ ಇನಿಂಗ್ಸ್‌ನಲ್ಲಿ 3 ವಿಕೆಟ್‌ಗಳನ್ನು ಕಬಳಿಸುವುದರೊಂದಿಗೆ ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಒಟ್ಟು 43 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತದ ಕ್ರಿಕೆಟ್ ದಂತಕತೆ ಕಪಿಲ್‌ದೇವ್ ದಾಖಲೆಯನ್ನು ಸರಿದೂಗಿಸಿದರು.

ಇಶಾಂತ್ ತನ್ನ 12ನೇ ಟೆಸ್ಟ್‌ನಲ್ಲಿ(18 ಇನಿಂಗ್ಸ್)ಈ ಮೈಲುಗಲ್ಲು ತಲುಪಿದ್ದಾರೆ. ಇಶಾಂತ್ ಇಂಗ್ಲೆಂಡ್‌ನ 2ನೇ ಇನಿಂಗ್ಸ್‌ನಲ್ಲಿ ಇನ್ನೊಂದು ವಿಕೆಟ್ ಪಡೆದರೆ ಆಲ್‌ರೌಂಡ್ ದಂತಕತೆ ಕಪಿಲ್‌ದೇವ್ ದಾಖಲೆಯನ್ನು ಮುರಿಯುವ ಅವಕಾಶವಿದೆ.

ಇಂಗ್ಲೆಂಡ್ ನೆಲದಲ್ಲಿ ಆ ತಂಡದ ವಿರುದ್ಧ ಗರಿಷ್ಠ ವಿಕೆಟ್ ಪಡೆದವರ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ 3ನೇ ಸ್ಥಾನದಲ್ಲಿದ್ದಾರೆ. ಕುಂಬ್ಳೆ 10 ಪಂದ್ಯಗಳಲ್ಲಿ(19 ಇನಿಂಗ್ಸ್)36 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಬಿಷನ್ ಸಿಂಗ್ ಬೇಡಿ(12 ಟೆಸ್ಟ್,35 ವಿಕೆಟ್)4ನೇ ಸ್ಥಾನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News