ಭಾರತ್ ಬಂದ್‌ಗೆ ಬೆಂಬಲ: ಕಾಂಗ್ರೆಸ್ ಐಟಿಸೆಲ್ ಮನವಿ

Update: 2018-09-09 11:16 GMT

ಉಡುಪಿ, ಸೆ.9: ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಸೆ.10ರಂದು ಸರ್ವ ಪ್ರತಿಪಕ್ಷಗಳ ಸಹಕಾರದೊಂದಿಗೆ ಸ್ವಯಂ ಪ್ರೇರಿತ ಭಾರತ್ ಬಂದ್‌ಗೆ ಕರೆ ನೀಡಿದ್ದು, ಇದಕ್ಕೆ ಬೆಂಬಲವಾಗಿ ಜಿಲ್ಲೆಯ ಎಲ್ಲಾ ವಾಣಿಜ್ಯ ವ್ಯಾಪರಸ್ಥರು ಹಾಗೂ ಎಲ್ಲಾ ಸಂಘ ಸಂಸ್ಥೆಗಳು ಸ್ವಯಂಪ್ರೇರಿತ ರಾಗಿ ಬಂದ್ ಆಚರಿಸಬೇಕೆಂದು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಐಟಿ ಸೆಲ್ ಮನವಿ ಮಾಡಿದೆ.

ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಇಂಧನ ಬೆಲೆ ದಾಖಲೆ ರೀತಿ ಯಲ್ಲಿ ಏರಿಕೆ ಕಾಣುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ತಲುಪಿದ್ದು, ಜನಸಾಮಾನ್ಯರ ಬದುಕು ದುಸ್ಥರವಾಗುತ್ತಿದೆ. ಸರಕಾರ ಬೆಲೆ ಏರಿಕೆಯ ನಾಗಾಲೋಟಕ್ಕೆ ಕಡಿವಾಣ ಹಾಕಲು ತಕ್ಷಣ ಕ್ರಮ ಕೈಗೊಳ್ಳಬೇಕು. ತೈಲ ಬೆಲೆ ಏರಿಕೆಯಿಂದ ಕೇಂದ್ರ ಸರಕಾ 11 ಲಕ್ಷ ಕೋಟಿ ರೂ. ಸಂಗ್ರಹಿಸಿದೆ.

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂಬ ಬೇಡಿಕೆಗೂ ಕೇಂದ್ರ ಮನ್ನಣೆ ನೀಡುತ್ತಿಲ್ಲ. ಕಳೆದ 4 ವರ್ಷಗಳಲ್ಲಿ ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಾಧ್ಯವಾಗದೆ ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಐಟಿ ಸೆಲ್‌ನ ಉಪಾಧ್ಯಕ್ಷ ರಫೀಕ್ ಕಲ್ಯಾಣಪುರ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News