‘ಅಜಯ್ ಭಾರತ್, ಅಟಲ್ ಬಿಜೆಪಿ’: ಲೋಕಸಭಾ ಚುನಾವಣೆಗೆ ಬಿಜೆಪಿಯ ಹೊಸ ಘೋಷಣೆ

Update: 2018-09-09 14:54 GMT

ಹೊಸದಿಲ್ಲಿ, ಸೆ.9: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ‘ಅಜಯ್ ಭಾರತ್, ಅಟಲ್ ಬಿಜೆಪಿ’ ಎಂಬ ಹೊಸ ಘೋಷಣೆಯನ್ನು ಪರಿಚಯಿಸಿದೆ.

ಚಿಕಾಗೋದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ನುಡಿನಮನ ಸಲ್ಲಿಸಿದರು.

“ಕಣ್ಣಲ್ಲಿ ಕಣ್ಣಿಟ್ಟು ನೋಡಲು ಸಾಧ್ಯವಾಗದವರು ಮಹಾಘಟಬಂಧನದ ಬಗ್ಗೆ ಯೋಚಿಸುತ್ತಿದ್ದಾರೆ. ಸಣ್ಣ ಪಕ್ಷಗಳನ್ನೂ ಸೇರಿಸಿ ಒಬ್ಬರೇ ಒಬ್ಬರು ಕಾಂಗ್ರೆಸ್ ನಾಯಕತ್ವವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News