ದೇಶದಲ್ಲಿ ವೈದ್ಯಕೀಯ ಶಿಕ್ಷಣ ದುಬಾರಿಯಾಗುತ್ತಿದೆ: ಕೆ.ಸುಜಾತರಾವ್

Update: 2018-09-09 14:56 GMT

ಬೆಂಗಳೂರು, ಸೆ. 9: ಭಾರತದಲ್ಲಿ ವೈದ್ಯಕೀಯ ಶಿಕ್ಷಣ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೆಚ್ಚಭರಿಸಲಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಕೆ.ಸುಜಾತರಾವ್ ವಿಷಾದ ವ್ಯಕ್ತಪಡಿಸಿದರು.

ರವಿವಾರ ನಗರದಲ್ಲಿ ಆಯೋಜಿಸಿದ್ದ ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಮ್‌ಗಳ ಸಂಘ (ಪಾನಾ)ದ ಪ್ರಸಕ್ತ ಸಾಲಿನ ಕರ್ನಾಟಕ ಆರೋಗ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ವೈದ್ಯಕೀಯ ಕಾಲೇಜು ಪ್ರಾರಂಭಿಸಲು ನೂರಾರು ಕೋಟಿ ರೂಪಾಯಿಗಳ ಅಗತ್ಯವಿದೆ, ಕಟ್ಟಡ ನಿರ್ಮಾಣಕ್ಕಿಂತ ಮಾನವ ಸಂಪಲ್ಮೂಲ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ ಎಂದು ಹೇಳಿದರು.

ಭಾರತೀಯ ವೈದ್ಯಕೀಯ ಮಂಡಳಿಯ ಮಾರ್ಗಸೂಚಿಗಳು ಸರಳೀಕರಣಗೊಳ್ಳಿಸಬೇಕಿದೆ. ಅಲ್ಲದೆ, ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಸಹಾಯ ಧನ ಅವಶ್ಯಕತೆಯಿದೆ ಎಂದರು.

ಸಮ್ಮೇಳನದಲ್ಲಿ ಸಂಘದ ಅಧ್ಯಕ್ಷ ಡಾ.ಮದನ್, ಎಸ್.ಗಾಯ್ಕವಾಡ್, ಶಿಕ್ಷಣ ತಜ್ಞ ಕೆ.ಇ.ರಾಧಾಕೃಷ್ಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News