ತೈಲ ಬೆಲೆ ಏರಿಕೆ ಮುಂದುವರಿಕೆ: ದಾಖಲೆ ಮಟ್ಟ ತಲುಪಿದ ಪೆಟ್ರೋಲ್, ಡೀಸೆಲ್ ಬೆಲೆ

Update: 2018-09-09 15:22 GMT

ಹೊಸದಿಲ್ಲಿ, ಸೆ.9: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿರುವುದು ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಏರಿಕೆಯ ಕಾರಣ ತೈಲ ಬೆಲೆ ಏರಿಕೆ ಮುಂದುವರಿದಿದ್ದು ರವಿವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆ ಮಟ್ಟಕ್ಕೆ ತಲುಪಿದೆ.

ರವಿವಾರ ಪೆಟ್ರೋಲ್ ಬೆಲೆ ಲೀಟರ್‌ಗೆ 12 ಪೈಸೆ, ಡೀಸೆಲ್ ಬೆಲೆ ಲೀಟರ್‌ಗೆ 10 ಪೈಸೆ ಏರಿಕೆಯಾಗಿದೆ ಎಂದು ತೈಲ ಮಾರಾಟಗಾರರು ಪ್ರಕಟಿಸಿದ್ದಾರೆ. ರವಿವಾರ ದಿಲ್ಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 80.50 ರೂ, ಡೀಸೆಲ್ 72.61 ರೂ.ಗೆ ತಲುಪಿದೆ. ನಾಲ್ಕು ಮೆಟ್ರೋಪಾಲಿಟನ್ ನಗರಗಳ ಪೈಕಿ ದಿಲ್ಲಿಯಲ್ಲಿ ಕಡಿಮೆ ತೆರಿಗೆಯ ಕಾರಣ ತೈಲ ಬೆಲೆಯೂ ಕಡಿಮೆಯಾಗಿದೆ. ಈ ಮಧ್ಯೆ, ನಿರಂತರ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಸೆ.10ರಂದು (ಸೋಮವಾರ) ವಿಪಕ್ಷಗಳು ಭಾರತ್ ಬಂದ್ ಪ್ರತಿಭಟನೆಗೆ ಕರೆ ನೀಡಿವೆ. ಕೇಂದ್ರ ಸರಕಾರ ತೈಲ ಬೆಲೆ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದರೆ ತೈಲ ಬೆಲೆಯೂ ಕಡಿಮೆಯಾಗುತ್ತದೆ. ಆದರೆ ತನ್ನ ಆದಾಯವನ್ನು ಕಳೆದುಕೊಳ್ಳಲು ಸಿದ್ಧವಿಲ್ಲದ ಸರಕಾರ , ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದೆ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News