ಸ್ಮಾರ್ಟ್‍ಸಿಟಿ ಯೋಜನೆಯ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಶಾಸಕ ಶಿವಶಂಕರಪ್ಪ ಸೂಚನೆ

Update: 2018-09-09 16:08 GMT

ದಾವಣಗೆರೆ,ಸೆ.9 : ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ನಗರದ ಎಂ.ಜಿ.ರಸ್ತೆ ಮತ್ತಿತರೆ ರಸ್ತೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ಶಾಮನೂರು ಶಿವಶಂಕರಪ್ಪ ಅಧಿಕಾರಿಗಳಿಗೆ ಸೂಚಿಸಿದರು. 

ಸ್ಮಾರ್ಟ್ ಸಿಟಿ ಯೋಜನೆ ಕುರಿತಂತೆ ಗೃಹ ಕಚೇರಿಯಲ್ಲಿ ನಡೆದ ಸ್ಮಾರ್ಟ್‍ಸಿಟಿ ಯೋಜನೆಯ ಅಧಿಕಾರಿಗಳ ಸಭೆಯಲ್ಲಿ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ವಾಣಿಜ್ಯ ಪ್ರದೇಶವಾದ ಮಂಡಿಪೇಟೆ, ಎಂ.ಜಿ.ರಸ್ತೆ, ಚೌಕಿಪೇಟೆ, ಚಾಮರಾಜಪೇಟೆ ರಸ್ತೆಗಳಲ್ಲಿ ಒಳಚರಂಡಿ, ಮಳೆ ನೀರು ಚರಂಡಿ, ಕುಡಿಯುವ ನೀರು ಸರಬರಾಜು, ವಿದ್ಯುತ್ ವ್ಯವಸ್ಥೆ, ಅಂಡರ್ ಗ್ರೌಂಡ್ ಕೇಬಲ್ ಒಳಗೊಂಡ ಕಾಂಕ್ರಿಟ್ ರಸ್ತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕೆಂದು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಾಲಿಕೆ ಸದಸ್ಯರಾದ ದಿನೇಶ್.ಕೆ.ಶೆಟ್ಟಿ, ಶಿವನಳ್ಳಿ ರಮೇಶ್, ಸ್ಮಾರ್ಟ್ ಸಿಟಿ ಯೋಜನೆಯ ಮುಖ್ಯ ಅಭಿಯಂತರ ಸತೀಶ್, ಗುರುಪಾದಯ್ಯ, ಆರ್.ಎನ್.ಶ್ರೀನಾಥ್ ರೆಡ್ಡಿ ಇತರರು ಇದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News