ಕಾಸರಗೋಡು: ಬಂದ್‌ಗೆ ವ್ಯಾಪಕ ಬೆಂಬಲ

Update: 2018-09-10 04:58 GMT

ಕಾಸರಗೋಡು, ಸೆ.10: ಇಂಧನಗಳ ಬೆಲೆ ಏರಿಕೆಯನ್ನು ಪ್ರತಿಭಟಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿರುವ ಭಾರತ ಬಂದ್ ಕರೆಗೆ ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಇದರಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಕೇರಳದಲ್ಲಿ ಆಡಳಿತಾರೂಢ ಎಲ್‌ಡಿಎಫ್ ಮತ್ತು ಪ್ರತಿಪಕ್ಷವಾದ ಯುಡಿಎಫ್ ಕೂಡಾ ಬೆಳಗ್ಗೆ 6ರಿಂದ ಸಂಜೆ 6ರ ತನಕ ಬಂದ್‌ಗೆ ಬೆಂಬಲ ನೀಡಿದೆ. ಇದರಿಂದ ಕೇರಳವೇ ಸ್ತಬ್ಧವಾಗಿದೆ. ಕಾಸರಗೋಡಿನಲ್ಲಿ ಬೆಳಗ್ಗೆಯಿಂದಲೇ ಯಾವುದೇ ಬಸ್ಸುಗಳು ರಸ್ತೆಗಿಳಿದಿಲ್ಲ. ಬಹುತೇಕ ಶಾಲೆಗಳಿಗೆ ರಜೆ ಸರಲಾಗಿದೆ. ತೆರೆದಿರುವ ಕೆಲವು ಶಾಲೆಗಳಲ್ಲೂ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಸರಕಾರಿ ಕಚೇರಿಗಳಲ್ಲಿ ಹಾಜರಾತಿ ವಿರಳವಾಗಿದೆ.

ಕೆಲವೇ ಕೆಲ ಖಾಸಗಿ ವಾಹನಗಳು ಮಾತ್ರ ರಸ್ತೆಗಿಳಿದಿವೆ. ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ. ಸರಕು ವಾಹನಗಳು ಅಲ್ಲಲ್ಲಿ ರಸ್ತೆ ಬದಿ ನಿಲುಗಡೆ ಗೊಳಿಸಲಾಗಿದ್ದು, ಸಂಚಾರ ನಡೆಸುತ್ತಿಲ್ಲ.

  ಬೆಳಗ್ಗೆ ರೈಲಿನಿಂದ ಕಾಸರಗೋಡು ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರು ವಾಹನ ಸೌಲಭ್ಯವಿಲ್ಲದೆ ಪರದಾಡುವಂತಾಯಿತು.
  ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News