ಪೆಟ್ರೋಲ್ ,ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಲು ರಾಜ್ಯ ಸರಕಾರ ಚಿಂತನೆ : ಸಿಎಂ ಕುಮಾರಸ್ವಾಮಿ

Update: 2018-09-10 07:48 GMT

ಹೊಸದಿಲ್ಲಿ, ಸೆ.10: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಕಡಿಮೆ ಇದೆ. ಕೇಂದ್ರ ಸರಕಾರದ ತೈಲ ನೀತಿ ಬದಲಾವಣೆಯಿಂದ ಇಂಧನ ದರ ಏರಿಕೆಯಾಗಿದೆ ಎಂದರು.

ಪೆಟ್ರೋಲ್, ಡೀಸೆಲ್ ಗೆ ಕರ್ನಾಟಕದಲ್ಲಿ ಕಡಿಮೆ ಸೆಸ್ ವಿಧಿಸಲಾಗುತ್ತಿದೆ. ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೆಸ್ ಇಳಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

 ರಾಜ್ಯದ ಏಳು ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. 118 ವರ್ಷಗಳ ಬಳಿಕ ಭಾರೀ ಮಳೆ ಸುರಿದಿದೆ. ಹೀಗಿದ್ದರೂ ಕೆಲವು ಜಿಲ್ಲೆ ಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ.   86 ತಾಲೂಕುಗಳು ಬರಪೀಡಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ  ರಾಜ್ಯದಲ್ಲಿ ಇತ್ತೀಚೆಗೆ ಪಾಕೃತಿಕ ವಿಕೋಪದಿಂದ ಸಂಭವಿಸಿರುವ ನಷ್ಟದ ಬಗ್ಗೆ ಮಾಹಿತಿ ನೀಡಲಾಗಿದೆ. ಬೆಳೆ ನಷ್ಟ ಪರಿಹಾರ  , ಮೂಲ ಸೌಕರ್ಯಗಳನ್ನು ಕಲ್ಪಿಸಲು ಪ್ರಧಾನಿಗೆ ಮನವಿ ಮಾಡಿರುವುದಾಗಿ  ಸಿಎಂ ಕುಮಾರಸ್ವಾಮಿ ತಿಳಿಸಿದರು.

 ಪರಿಸ್ಥಿತಿಯ ಅಧ್ಯಯನಕ್ಕೆ ಎರಡು ತಂಡಗಳನ್ನು ಕಳುಹಿಸುವಾಗಿ ಪ್ರಧಾನಿ ಭರವಸೆ ನೀಡಿದ್ದಾರೆ.  ಮೇಕೆದಾಟು ಯೋಜನೆಯ ಬಗ್ಗೆ ಪ್ರಧಾನಿ ಮೋದಿ ಅವರಲ್ಲಿ ಚಚರ್ಚಿಸಲಾಗಿದೆ. ಯೋಜನೆಯ ಉಪಯೋಗದ ಬಗ್ಗೆ ಪ್ರಧಾನಿ ಅವರಿಗೆ ಮನವರಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News