ಸಂತ ಅಲೋಶಿಯಸ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ವಿಚಾರಸಂಕಿರಣ

Update: 2018-09-10 11:45 GMT

ಮಂಗಳೂರು, ಸೆ.10: ಸಂತ ಅಲೋಶಿಯಸ್ ಕಾಲೇಜಿನಲ್ಲಿ ‘ವಿಕಿರಣಶೀಲ ವಸ್ತುಗಳು ಮತ್ತು ವಿಕಿರಣದ ಉಪಯೋಗಗಳು’ ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರಸಂಕಿರಣವನ್ನು ಕೇಂದ್ರ ಸರಕಾರದ ಅಣುಶಕಿತಿ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಎಸ್. ಭಾರಧ್ವಾಜ್ ಉದ್ಘಾಟಿಸಿದರು.

ಅವರು ಮಾತನಾಡಿ, ಜನಸಾಮಾನ್ಯರು ವಿಕಿರಣಶೀಲ ವಸ್ತುಗಳ ಬಗ್ಗೆ ತಪ್ಪು ತಿಳುವಳಿಕೆ ಹೊಂದಿರುವುದರ ಬದಲಾಗಿ ಅಂತರಾಷ್ಟ್ರೀಯ ಮಟ್ಟದ ಸಂಸ್ಥೆಗಳು ತಯಾರಿಸಿದ ವರದಿಯನ್ನು ಆಧಾರಿಸಿ ಅದರ ಸತ್ಯಾಸತ್ಯತೆಗಳನ್ನು ತಿಳಿದುಕೊಳ್ಳಬೇಕು. ವಿಕಿರಣಶೀಲ ವಸ್ತುಗಳು ವೈದ್ಯಕೀಯ ಹಾಗೂ ಕೃಷಿ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಅತಿಥಿಯಾಗಿ ಭಾಗವಹಿಸಿದ್ದ ದೆಹಲಿ ವಿಶ್ವವಿದ್ಯಾಲಯದ ಮಿರಾಂಡಾ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಹಾಗೂ ಕೇಂದ್ರ ಸರಕಾರದ ಸಚಿವ ಸಂಪುಟದ ವೈಜ್ಞಾನಿಕ ಸಲಹಾ ಮಂಡಳಿಯ ಸದಸ್ಯರಾಗಿರುವ ಡಾ.ಪ್ರತಿಭಾ ಜೋಲಿಯವರು ತಂತ್ರಜ್ಞಾನದ ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳು ಅರಿತಿರಬೇಕು ಎಂದು ಹೇಳಿದರು.

ಸಂತ ಅಲೋಶಿಯಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾಗಿರುವ ವಂದನೀಯ ಫಾ.ಡೈನೇಶಿಯ್ ವಾಝ್ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ.ಪ್ರವೀಣ್ ಮಾರ್ಟಿಸ್ ಎಸ್.ರವರು ತಮ್ಮ ಭಾಷಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಹಯೋಗ ನೀಡಿದ ಭಾರತ ಸರಕಾರದ ಅಣುಶಕ್ತಿ ಇಲಾಖೆ,ಅಣುಶಕ್ತಿ ಸಂಶೋಧನಾ ಮಂಡಳಿ ಹಾಗೂ ಎಂ.ಪಿ. ಸಂಸ್ಥೆಗಳನ್ನು ಅಭಿನಂದಿಸಿದರು.

ಕಾರ್ಯಕ್ರಮದ ಸಂಯೋಜಕರಲ್ಲಿ ಓರ್ವರಾದ ಜಾನ್ ಚಾಂಡಿಯವರು ಕಾರ್ಯಕ್ರಮದ ಬಗ್ಗೆ ಮಾತನಾಡಿದರು.ಕಾರ್ಯಕ್ರಮ ಸಂಯೋಜರಾದ ಡಾ.ಚಂದ್ರಶೇಖರ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು.ಕಾರ್ಯದರ್ಶಿ ಡಾ.ರೀಟಾ ಕ್ರಾಸ್ತಾರವರು ವಂದಿಸಿದರು.ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಜಾನಿಸ್ ಗೋವಿಯಸ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News