​ಪೊಲೀಸ್ ದೌರ್ಜನ್ಯ ಖಂಡನೀಯ: ಪ್ರಮೋದ್ ಮಧ್ವರಾಜ್

Update: 2018-09-10 12:23 GMT

ಉಡುಪಿ, ಸೆ.10: ಶಾಂತಿಯುತ ಬಂದ್ ಮಾಡುವಂತೆ ಮನವಿ ಮಾಡು ತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರತಿರೋಧ ವ್ಯಕ್ತಪಡಿಸುತ್ತಿದ್ದ ಬಿಜೆಪಿ ಕಾರ್ಯ ಕರ್ತರನ್ನು ತಡೆಯುವ ಕೆಲಸವನ್ನು ಪೊಲೀಸರು ಮಾಡಬೇಕಾಗಿತ್ತು. ಅದರ ಬದಲು ಎಸ್ಪಿಯವರು ಪಕ್ಷದ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಮೇಲೆ ಲಾಠಿ ಚಾಜ್ ನಡೆಸಿ ಹಲ್ಲೆ ಮಾಡಿರುವುದು ಖಂಡನೀಯ. ಇಲ್ಲಿ ಪೊಲೀಸ್ ದೌರ್ಜನ್ಯ ನಡೆದಿರುವುದು ಕಂಡುಬರುತ್ತದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆರೋಪಿಸಿದ್ದಾರೆ.

ಉಡುಪಿ ಜಿಲ್ಲಾಸ್ಪತ್ರೆಯ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾ ಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಶಾಂತಿಯುತವಾಗಿ ಬಂದ್ ಆಚರಿ ಸಲು ಮನವಿ ಮಾಡುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಅದಕ್ಕೆ ತಡೆಯೊಡ್ಡುವ ಕೆಲಸ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಂದ್‌ಗೆ ಅವಕಾಶ ಇದೆ. ಬಿಜೆಪಿಯ ವರು ಹಲವು ಬಾರಿ ಬಂದ್‌ಗೆ ಕರೆ ಕೊಟ್ಟಾಗ ಕಾಂಗ್ರೆಸ್ ಕಾರ್ಯಕರ್ತರು ಎಂದಿಗೂ ತಡೆಯೊಡ್ಡುವ ಕೆಲಸ ಮಾಡಿಲ್ಲ ಎಂದು ಹೇಳಿದರು.

ಈಗಾಗಲೇ ಈ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಗಮನಕ್ಕೆ ತರ ಲಾಗಿದೆ. ಮುಂದಿನ ಕ್ರಮದ ಬಗ್ಗೆ ಮುಖಂಡರು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಅಗತ್ಯ ಬಿದ್ದರೆ ಗೃಹ ಮಂತ್ರಿಯವರನ್ನು ಕೂಡ ಸಂಪರ್ಕ ಮಾಡಲಾಗುವುದು. ಈ ಪೊಲೀಸ್ ದೌರ್ಜನ್ಯದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಧರಣಿ ನಡೆಸುವ ಬಗ್ಗೆ ನಿರ್ಧಾರ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಶಾಂತಿಯುತ ಬಂದ್ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯ ಕರ್ತರಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸುವ ಕೆಲಸ ಮಾಡಿದ್ದಾರೆ. ಈ ವೇಳೆ ಪೊಲೀಸರು ಅನವಶ್ಯಕವಾಗಿ ಲಾಠಿಚಾರ್ಜ್ ನಡೆಸಿ ಪಕ್ಷದ ಕಾರ್ಯಕರ್ತ ರನ್ನು ಗಾಯಗೊಳಿಸಿದ್ದಾರೆ. ಇದನ್ನು ಖಂಡಿಸಿ ಎಸ್ಪಿ ಕಚೇರಿ ಎದುರು ಧರಣಿ ನಡೆಸುವ ಬಗ್ಗೆ ಪಕ್ಷದ ಮುಖಂಡರ ಜೊತೆ ಚರ್ಚಿಸಿ ತೀರ್ಮಾನ ತೆಗೆದು ಕೊಳ್ಳಲಾಗುವುದು. ಲಾಠಿಚಾರ್ಜ್ ಕುರಿತು ಸರಿಯಾದ ತನಿಖೆ ಆಗಬೇಕು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News