ಸೆ.11: ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ ವಾರ್ಷಿಕೋತ್ಸವ

Update: 2018-09-10 14:37 GMT

ಬೆಂಗಳೂರು, ಸೆ. 10: ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದ 125ನೆ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭವನ್ನು ಕ್ರೀಡಾ ಇಲಾಖೆ, ಬೆಂಗಳೂರು ನಗರ-ಗ್ರಾಮಾಂತರ ಜಿಲ್ಲೆ ಸಂಯುಕ್ತಾಶ್ರಯದಲ್ಲಿ ನಾಳೆ(ಸೆ.11) ಮಧ್ಯಾಹ್ನ 3:30ಕ್ಕೆ ಇಲ್ಲಿನ ವಸಂತನಗರದಲ್ಲಿ ಗುರುನಾನಕ್ ಭವನದಲ್ಲಿ ಏರ್ಪಡಿಸಲಾಗಿದೆ.

ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ, ನೃತ್ಯ ರೂಪಕ, ಸಂಗೀತ ಕಾರ್ಯಕ್ರಮ ಆಯೋಜಿಸಿದ್ದು, ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಯುಕ್ತರು ಉದ್ಘಾಟಿಸಲಿದ್ದು, ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News