‘ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಿ’

Update: 2018-09-10 15:32 GMT

ಮಂಗಳೂರು, ಸೆ.10: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣಪನ ಮೂರ್ತಿಗಳನ್ನು ಬಳಸಬಾರದು. ಅಲಂಕಾರಕ್ಕೂ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ಈ ಮೂಲಕ ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ಹಿರಿಯ ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ಮನವಿ ಮಾಡಿದ್ದಾರೆ.

ಬಾವಿ, ಕೆರೆ, ನದಿಗಳಲ್ಲಿ ಗಣಪತಿ ವಿಸರ್ಜನೆ ಮಾಡುವಂತಿಲ್ಲ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಲಿದೆ. ಹಬ್ಬದ ಸಂದರ್ಭ ಪಟಾಕಿ ಸಿಡಿಸುವುದು, ಕಸವನ್ನು ಎಲ್ಲೆಂದರಲ್ಲಿ ಬಿಸಾಡುವುದರಿಂದ ಸಮಾಜದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ ಹೂವಿನ ಹಾರ, ತಟ್ಟೆ, ಲೋಟ, ಎಲೆಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಕಸ ವಿಲೇವಾರಿ ವಾಹನಕ್ಕೆ ನೀಡಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News