ಭಾರತ ಬಹುತೇಕ ಬಂದ್

Update: 2018-09-10 17:57 GMT

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಸೋಮವಾರ ಕರೆ ನೀಡಿದ್ದ ಭಾರತ ಬಂದ್ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಯುಪಿಎ ನಾಯಕಿ ಸೋನಿಯಾ ಗಾಂಧಿ ಹಾಗೂ ಪ್ರತಿಪಕ್ಷಗಳ ನಾಯಕರಾದ ಶರದ್ ಪವಾರ್, ಶರದ್ ಯಾದವ್ ಮತ್ತಿತರ ನಾಯಕರು ಭಾಗವಹಿಸಿದ್ದರು. ಕೆಲವು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಕರ್ನಾಟಕದಲ್ಲಿ ಭಾರತ್ ಬಂದ್ ಯಶಸ್ವಿಯಾಗಿದೆ. ಅನೇಕ ರಾಜ್ಯಗಳಲ್ಲಿ ಶಿಕ್ಷಣ ಸಂಸ್ಥೆಗಳು, ವ್ಯಾಪಾರ ಕೇಂದ್ರಗಳು ಮುಚ್ಚಿದ್ದವು. ಬಸ್ ಹಾಗೂ ಇತರ ವಾಹನಗಳು ರಸ್ತೆಗಿಳಿಯದ ಕಾರಣ ಜನರು ಪರದಾಡುವಂತಾಯಿತು. ಕೆಲವೆಡೆ ಹಿಂಸಾಚಾರದ ಘಟನೆಗಳು ವರದಿಯಾಗಿದ್ದು, ಬಿಹಾರ, ಅಸ್ಸಾಂ ಮುಂತಾದ ರಾಜ್ಯಗಳಲ್ಲಿ ಪ್ರತಿಭಟನಾಕಾರರು ರಸ್ತೆ ಹಾಗೂ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor