ಕೊಡಗು ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ನಿವೇಶನ ಗುರುತು

Update: 2018-09-10 18:07 GMT

ಮಡಿಕೇರಿ, ಸೆ.10 : ಪ್ರಕೃತಿ ವಿಕೋಪದಿಂದಾಗಿ ಆಸ್ತಿ-ಪಾಸ್ತಿ, ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ವಿವಿಧ ಗ್ರಾಮಗಳಲ್ಲಿ ನಿವೇಶನ ಗುರುತು ಮಾಡಿದೆ. 

ಕರ್ಣಂಗೇರಿ ಗ್ರಾಮದ ಸರ್ವೆ ನಂ.178 ರಲ್ಲಿ ನಾಲ್ಕು ಎಕರೆ ಗುರುತಿಸಲಾಗಿದ್ದು, ಸುಮಾರು 80 ನಿವೇಶನಗಳು ಲಭ್ಯವಾಗಲಿದೆ. ಈ ಗ್ರಾಮದಲ್ಲಿ ಕರ್ಣಂಗೇರಿಯ 13, ಮಕ್ಕಂದೂರಿನ 11, ಹಚ್ಚಿನಾಡಿ 1, ಹೊದಕಾನ 9 ಹಾಗೂ ನಗರದ 43 ಕುಟುಂಬಗಳಿಗೆ ಒಟ್ಟು 65 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಿಲಾಗಿದೆ. 

ಕೆ.ನಿಡುಗಣೆ ಗ್ರಾಮದ ಸರ್ವೆ ನಂ.1/13 ರಲ್ಲಿ ಅಂದಾಜು 5 ಎಕರೆ ಜಾಗ ಗುರುತಿಸಲಾಗಿದ್ದು, ಕಾಲೂರು ಗ್ರಾಮದ 22 ಕುಟುಂಬಗಳಿಗೆ, ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಸರ್ವೆ ನಂ.103 ರಲ್ಲಿ 7 ಎಕರೆ ಜಾಗ ಗುರುತಿಸಲಾಗಿದ್ದು, ಹೆಬ್ಬೆಟ್ಟಗೇರಿಯ 90 ಕುಟುಂಬಗಳಿಗೆ, ಗಾಳಿಬೀಡು ಸರ್ವೆ ನಂ.99/3, 100/3, 100/4 ರಲ್ಲಿ 13 ಎಕರೆ ಜಾಗ ಗುರುತಿಸಲಾಗಿದ್ದು, ಗಾಳಿಬೀಡು ಗ್ರಾಮದ 19 ಕುಟುಂಬಗಳಿಗೆ, ನಿಡುವಟ್ಟಿನ 26 ಕುಟುಂಬಗಳಿಗೆ ಬಾರಿಬೆಳ್ಳಚ್ಚು 2 ಕುಟುಂಬಗಳಿಗೆ, ಒಂದನೇ ಮೊಣ್ಣಂಗೇರಿ 9 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.  

ಮದೆ ಗ್ರಾಮದ ಸರ್ವೆ ನಂ.399 ರಲ್ಲಿ 10 ಎಕರೆ ಜಾಗ ಗುರುತಿಸಲಾಗಿದ್ದು, ಎರಡನೇ ಮೊಣ್ಣಂಗೇರಿಯ 188 ಕುಟುಂಬಗಳಿಗೆ, ಮದೆ ಗ್ರಾಮದ 79 ಕುಟುಂಬಗಳಿಗೆ, ಸಂಪಾಜೆಯಲ್ಲಿ ಸರ್ವೆ ನಂ.54/1 ರಲ್ಲಿ 1.50 ಎಕರೆ ಗುರುತಿಸಲಾಗಿದ್ದು, ಸಂಪಾಜೆಯ 4 ಕುಟುಂಬಗಳಿಗೆ, ಬಿಳಿಗೇರಿಯ ಸರ್ವೆ ನಂ.347/3 ರಲ್ಲಿ 1.88 ಎಕರೆ ಜಾಗ ಗುರುತಿಸಲಾಗಿದ್ದು, ಹೆರವನಾಡಿನ 10 ಕುಟುಂಬಗಳಿಗೆ ಒಟ್ಟು 281 ಕುಟುಂಬಗಳಿಗೆ, ಜಂಬೂರು ಗ್ರಾಮದ ಸರ್ವೆ ನಂ.13/1 ರಲ್ಲಿ 50 ಎಕರೆ ಜಾಗ ಗುರುತಿಸಲಾಗಿದೆ. ಮಕ್ಕಂದೂರು ಗ್ರಾಮದ 99 ಕುಟುಂಬಗಳಿಗೆ, ಎಮ್ಮೆತಾಳು ಗ್ರಾಮದ 39 ಕುಟುಂಬಳಿಗೆ, ಮುಕ್ಕೋಡ್ಲು ಗ್ರಾಮದ 9 ಕುಟುಂಬಗಳಿಗೆ, ಮೇಘತ್ತಾಳು ಗ್ರಾಮದ 26 ಕುಟುಂಬಗಳಿಗೆ ಒಟ್ಟು 173 ಕುಟುಂಬಗಳಿಗೆ ಜಾಗ ಗುರುತಿಸಲಾಗಿದೆ. 
ಸೋಮವಾರಪೇಟೆ ತಾಲೂಕಿನ ಚೌಡ್ಲು 2 ಕುಟುಂಬಗಳಿಗೆ, ಕಿರಂಗಂದೂರು 6, ಬೇಳೂರು 4, ಹಾನಗಲ್ಲು 3, ನೆರುಗಳಲೆ 1, ಹಾಡಗೇರಿ 22, ಮುವತ್ತೋಕ್ಲು 4, ಇಗ್ಗೋಡ್ಲು 9, ಕಡಗದಾಳು 11, ಕಾಂಡನಕೊಲ್ಲಿ 5, ಕೊಪ್ಪತ್ತೂರು 3, ಜಂಬೂರು 4, ಗರ್ವಾಲೆ 2, ಶಿರಂಗಳ್ಳಿ 1, ಮಂಕ್ಯ 1, ಕಿಕ್ಕರಳ್ಳಿ 1, ಹಾಲೇರಿ 5 ಒಟ್ಟು 84 ಕುಟುಂಬಗಳಿಗೆ ನಿವೇಶನ ಗುರುತಿಸಲಾಗಿದೆ ಎಂದು ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಕೆ.ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.  

ಪರಿಹಾರ ಕೇಂದ್ರದಲ್ಲಿ 1320 ಮಂದಿ ಸಂತ್ರಸ್ತರು
ಮಡಿಕೇರಿ ತಾಲೂಕಿನ 10 ಪರಿಹಾರ ಕೇಂದ್ರಗಳಲ್ಲಿ 348 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 453 ಪುರುಷರು, ಮತ್ತು 477 ಮಹಿಳೆಯರು ಸೇರಿದಂತೆ 930 ಜನ ಸಂತ್ರಸ್ತರಿದ್ದಾರೆ.

ಸೋಮವಾರಪೇಟೆ ತಾಲೂಕಿನ 02 ಪರಿಹಾರ ಕೇಂದ್ರಗಳಲ್ಲಿ 154 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 189 ಪುರುಷರು ಮತ್ತು 201 ಮಹಿಳೆಯರು ಸೇರಿದಂತೆ ಒಟ್ಟು 390 ಜನ ಸಂತ್ರಸ್ತರಿದ್ದಾರೆ.  

ಒಟ್ಟಾರೆ ಜಿಲ್ಲೆಯಲ್ಲಿರುವ 12 ಪರಿಹಾರ ಕೇಂದ್ರಗಳಲ್ಲಿ ಒಟ್ಟು 502 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 642 ಪುರುಷರು ಮತ್ತು 678 ಮಹಿಳೆಯರು ಸೇರಿದಂತೆ ಒಟ್ಟು 1320 ಜನ ಸಂತ್ರಸ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. 

ಪ್ರಮಾಣ ಪತ್ರ ಪಡೆದುಕೊಳ್ಳಲು ಮನವಿ
ಜಿಲ್ಲೆಯ ಬಹಳಷ್ಟು ಗ್ರಾಮಗಳು ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿದ್ದು, ಭಾರಿ ಮಳೆಯಿಂದ ಹಾಗೂ ಭೂಕುಸಿತದಿಂದಾಗಿ ಹಲವರಿಗೆ ವಿವಿಧ ಇಲಾಖೆಯಿಂದ ನೀಡಲಾಗಿರುವ ಪ್ರಮಾಣ ಪತ್ರಗಳನ್ನು ಕಳೆದುಕೊಂಡಿರುವ ಸಂಭವವಿರುವ ಹಿನ್ನಲೆಯಲ್ಲಿ, ಸಂತ್ರಸ್ತರಿಗೆ ಈ ಪ್ರಮಾಣ ಪತ್ರಗಳನ್ನು ಒದಗಿಸುವ ಉದ್ದೇಶದಿಂದ ಕಂದಾಯ ಇಲಾಖೆಯ ನಾಡಕಚೇರಿಗಳಲ್ಲಿರುವ ಅಟಲ್‍ಜೀ ಜನಸ್ನೇಹಿ ಕೇಂದ್ರಗಳಲ್ಲಿ ಹಾಗೂ ಜಿಲ್ಲೆಯ ಒಟ್ಟು 104 ಗ್ರಾಮ ಪಂಚಾಯತ್ ಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪ್ರಮಾಣ ಪತ್ರ ಕಳೆದುಕೊಂಡಿರುವ ಸಂತ್ರಸ್ತರಿಗೆ ಪ್ರಮಾಣ ಪತ್ರಗಳನ್ನು ಉಚಿತವಾಗಿ ಮರುಮುದ್ರಿಸಿ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. 

ಕೊಡಗು ಜಿಲ್ಲೆಯಲ್ಲಿ ಬಹಳಷ್ಟು ಗ್ರಾಮಗಳು ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿದ್ದು, ಭಾರೀ ಮಳೆಯಿಂದ ಬರೆ ಕುಸಿತದಿಂದ ಮನೆ ಕಳೆದುಕೊಂಡಿದ್ದು, ನಿರಾಶ್ರಿತ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ. ಇಂತಹ ಸಂತ್ರಸ್ತರು ಸರ್ಕಾರದ ವಿವಿಧ ಇಲಾಖೆಯಿಂದ ನೀಡಲಾಗಿರುವ ಪ್ರಮಾಣ ಪತ್ರಗಳು ಹಾಗೂ ಇತರೆ ದಾಖಲೆಗಳನ್ನು ಕಳೆದುಕೊಂಡಿರುವ ಸಂಭವ ಹಿನ್ನೆಲೆ ಸಂತ್ರಸ್ತರಿಗೆ ಪ್ರಮಾಣ ಪತ್ರಗಳನ್ನು ಒದಗಿಸುವ ಉದ್ದೇಶದಿಂದ ಭೂಮಿ ನಿರ್ದೇಶನಾಲಯ http://www.parihara.karnataka.gov.in ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿದೆ.  

ಆ ನಿಟ್ಟಿನಲ್ಲಿ ದಾಖಲೆಗಳನ್ನು ಕಳೆದುಕೊಂಡಂತಹ ಸಂತ್ರಸ್ತರ ಹೆಸರು ಮತ್ತು ಇತರೆ ದಾಖಲೆಗಳನ್ನು ಆಯಾಯ ಪರಿಹಾರ ಕೇಂದ್ರಗಳಿಗೆ ತೆರಳಿ ತಂತ್ರಾಂಶ ಅಳವಡಿಸಲು ಸಾಧ್ಯವಿದ್ದಲ್ಲಿ ದಾಖಲೆಗಳನ್ನು ಉಚಿತವಾಗಿ ನೀಡಲು ತಂಡ ರಚಿಸಲಾಗಿದೆ. ಈ ತಂಡವು ಸೆಪ್ಟೆಂಬರ್, 11 ರಂದು ನಗರದ ಮೈತ್ರಿ ಸಭಾಂಗಣ, ಚೇಂಬರ್ ಆಫ್ ಕಾಮರ್ಸ್ ಕಟ್ಟಡ, ಕೆ.ಬಾಡಗದ  ಜಿಲ್ಲಾ ಪಂಚಾಯತ್ ಭವನ, ಹಾಗೆಯೇ ಸೆಪ್ಟೆಂಬರ್ 12 ರಂದು ಆಜಾದ್ ನಗರ, ನಗರದ ಕರ್ಣಂಗೇರಿ ಪರಿಹಾರ ಕೇಂದ್ರ, ಬಾಲಮಂದಿರ, ಸೆಪ್ಟೆಂಬರ್ 14 ರಂದು ಕುಶಾಲನಗರದ ವಾಲ್ಮೀಕಿ ಭವನ, ಸೆಪ್ಟೆಂಬರ್ 15 ರಂದು ಸಂಪಾಜೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕಲ್ಲುಗುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಶಿಬಿರ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News