ರಫೇಲ್ ಹಗರಣದ ವಿರುದ್ಧ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Update: 2018-09-11 07:30 GMT

ಮಂಗಳೂರು, ಸೆ.11: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರ 45 ಸಾವಿರ ಕೋಟಿ ರೂಪಾಯಿಗಳ ಮೊತ್ತದ ರಫೇಲ್ ಯುದ್ದ ವಿಮಾನ ಹಗರಣದ ಮೂಲಕ ದೇಶವನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.

ಇದಕ್ಕೂ ಮೊದಲು ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿ  ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿ ಬಂತು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮೇಯರ್ ಭಾಸ್ಕರ‌ ಮೊಯ್ಲಿ, ಮಾಜಿ ಶಾಸಕರಾದ ಬಿ.ಎ.ಮೊಯ್ದಿನ್ ಬಾವಾ, ಜೆ.ಆರ್.ಲೋಬೊ, ಮಾಜಿ ಮೇಯರ್ ಗಳಾದ ಕವಿತಾ ಸನಿಲ್, ಶಶಿಧರ್ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ದ.ಕ. ಜಿಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ಯು.ಪಿ.ಇಬ್ರಾಹೀಂ, ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಎಂ.ಎಸ್.ಮುಹಮ್ಮದ್, ಕೆ.ಕೆ.ಶಾಹುಲ್ ಹಮೀದ್, ಶಾಲೆಟ್ ಪಿಂಟೋ, ಸುರೇಶ್ ಬಳ್ಳಾಲ್  ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News