ಸೂಕ್ತ ಸ್ಥಳ ಗುರುತಿಸಿ ಅರಣ್ಯ ಹುತಾತ್ಮರ ಸ್ಮಾರಕ ಸ್ಥಾಪನೆ: ಪ್ರಭಾಕರನ್

Update: 2018-09-11 12:49 GMT

ಉಡುಪಿ, ಸೆ.11: ಮುಂದಿನ ವರ್ಷದೊಳಗೆ ಜಿಲ್ಲೆಯಲ್ಲಿ ಸೂಕ್ತ ಸ್ಥಳವನ್ನು ಗುರುತಿಸಿ ಅರಣ್ಯ ಹುತಾತ್ಮರ ಸ್ಮಾರಕ ಸ್ಥಾಪಿಸಿ, ಜಿಲ್ಲಾಮಟ್ಟದ ಹುತ್ಮಾತರ ದಿನವನ್ನು ಪೊಲೀಸ್ ಗೌರವದೊಂದಿಗೆ ಅಲ್ಲೇ ಆಚರಿಸಲು ಚಿಂತನೆ ನಡೆಸ ಲಾಗಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಉಪ ವಲಯ ಅರಣ್ಯ ಅಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹ ಯೋಗದೊಂದಿಗೆ ಅರಣ್ಯ ಹುತಾತ್ಮರ ಸ್ಮರಣಾರ್ಥ ರಕ್ತನಿಧಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಲಾದ 18ನೆ ವರ್ಷದ ರಕ್ತದಾನ ಶಿಬಿದಲ್ಲಿ ಅವರು ಮಾತನಾಡುತಿದ್ದರು.

ಕರ್ನಾಟಕ ರಾಜ್ಯ ಉಪ ವಲಯ ಅರಣ್ಯ ಅಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹ ಯೋಗದೊಂದಿಗೆ ಅರಣ್ಯ ಹುತಾತ್ಮರ ಸ್ಮರಣಾರ್ಥ ರಕ್ತನಿಧಿ ಕೇಂದ್ರದಲ್ಲಿ ಮಂಗಳವಾರ ಆಯೋಜಿಸಲಾದ 18ನೆ ವರ್ಷದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡುತಿದ್ದರು. ಅರಣ್ಯ ಸಂಪತ್ತನ್ನು ಕಾಪಾಡುವುದು ಕೇವಲ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಅರಣ್ಯ ಎಂಬುದು ಇಡೀ ಭೂಮಿಗೆ ಅಗತ್ಯವಾಗಿರುವುದರಿಂದ ಇದನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅಧಿಕಾರಿಗಳ ಹುದ್ದೆ ಗಳು ಬೇರೆ ಬೇರೆಯಾಗಿದ್ದರೂ ಎಲ್ಲರ ಕರ್ತವ್ಯವೂ ಅರಣ್ಯವನ್ನು ಸಂರಕ್ಷಿಸುವು ದಾಗಿದೆ ಎಂದು ಅವರು ತಿಳಿಸಿದರು.

ಇಂದು ಟಿಂಬರ್, ಮರಳು ಮಾಫಿಯಾ, ರಾಜಕಾರಣಿಗಳ ಒತ್ತಡಗಳ ಮಧ್ಯೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಿನದ 24 ಗಂಟೆಗಳ ಕಾಲವೂ ಕೆಲಸ ಮಾಡುತ್ತಿದ್ದಾರೆ. ಇಂದು ಜನರಲ್ಲಿ ಅರಣ್ಯ ಇಲಾಖೆಯವರ ಬಗ್ಗೆ ಅಭಿವೃದ್ಧಿಯ ವಿರೋಧಿಗಳು ಎಂಬ ಮನೋಭಾವನೆ ಮೂಡಿದೆ. ಇದ ರಿಂದ ಜನ ನಮ್ಮನ್ನು ವಿರೋಧಿಸುತ್ತಿದ್ದಾರೆ. ಆದರೆ ಜನ ನಮ್ಮ ಕರ್ತವ್ಯವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಶಿಬಿರವನ್ನು ಲಯನ್ಸ್ ಜಿಲ್ಲಾ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೇರಿ ಗಾರ್ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷ ಜೀವನ್‌ದಾಸ್ ಶೆಟ್ಟಿ ವಹಿಸಿದ್ದರು.

ರೂಪಾ ಪ್ರಭಾಕರನ್, ಸಂಘದ ಗೌರವಾಧ್ಯಕ್ಷ ಮುಡೂರ ಕೊಠಾರಿ, ರಾಜ್ಯ ಅರಣ್ಯ ರಕ್ಷಕರು ಮತ್ತು ವೀಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ಜಿ.ನಾಯ್ಕಿ ಉಪಸ್ಥಿತರಿದ್ದರು. ಸಂಘದ ಗೌರವ ಸಲಹೆಗಾರ ಪ್ರಕಾಶ್ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ನಾಗೇಶ್ ಬಿಲ್ಲವ ಸ್ವಾಗತಿಸಿ ಕಾರ್ಯ್ರಮ ನಿರೂ ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News