ಉಡುಪಿಗೆ ಮಾತೃವಂದನಾ ಯೋಜನೆ ಪ್ರಶಸ್ತಿ

Update: 2018-09-11 12:50 GMT

ಉಡುಪಿ, ಸೆ.11: ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನ ಗೊಂಡು ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಡೆಹ್ರಾಡೂನ್‌ನಲ್ಲಿ ಸೆ.1ರಿಂದ 7ರವರೆಗೆ ಮಾತೃವಂದನಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ವಲಯದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಉಡುಪಿ ಜಿಲ್ಲೆಗೆ ಪ್ರಶಸ್ತಿ ದೊರೆತಿದೆ. ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕಿ ಗ್ರೇಸಿ ಗೆನ್ಸಾಲೀಸ್ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನೀತಿ ಆಯೋಗ ಸದಸ್ಯ ವಿ.ಕೆ.ಪೌಲ್, ಇಲಾಖೆಯ ಜಂಟಿ ನಿರ್ದೇಶಕ ರಾಜೇಶ್ ಕುಮಾರ್, ಹೆಚ್ಚುವರಿ ಕಾರ್ಯದರ್ಶಿ ರಾಧಾ ರತೌರಿ, ಕಾರ್ಯದರ್ಶಿ ವಿಕಾಸ್ ಚೌಧರಿ, ಬ್ರಹ್ಮಾವರ ಸಿಡಿಪಿಒ ಶೋಭಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News