ಬೆಂಗಳೂರು: ಮದ್ಯದ ಅಮಲಿನಲ್ಲಿ ವ್ಯಕ್ತಿಗೆ ಹಲ್ಲೆ

Update: 2018-09-11 12:52 GMT

ಬೆಂಗಳೂರು, ಸೆ.11: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯಲ್ಲಿ ನಗರದ ಖಲೀಂಪಾಷ(32) ಎಂಬುವವರು ಗಂಭೀರ ಗಾಯಗೊಂಡಿದ್ದು, ಹೊಸೂರು ರಸ್ತೆಯ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸೋಮವಾರ ಮಧ್ಯಾಹ್ನ 3:30ರ ಸುಮಾರಿಗೆ ಲಾಲ್‌ಬಹದ್ದೂರ್ ಶಾಸ್ತ್ರಿ ನಗರದ ಬಳಿ ಮೂವರು ಕುಡಿದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಖಲೀಂ ಪಾಷ ಜತೆ ಜಗಳವಾಡಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆ.

ಗಂಭೀರ ಗಾಯಗೊಂಡ ಖಲೀಂಪಾಷನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಈ ಸಂಬಂಧ ಯಲಹಂಕ ನ್ಯೂಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News