ಕೋಯಂಬತ್ತೂರು ಬಾಂಬ್ ಸ್ಫೋಟ ಪ್ರಕರಣ: 20 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯ ಬಂಧನ

Update: 2018-09-11 16:26 GMT

ಚೆನ್ನೈ, ಸೆ. 11: ಐವತ್ತೆಂಟು ಜನರ ಸಾವಿಗೆ ಕಾರಣವಾಗಿದ್ದ ಕೋಯಂಬತ್ತೂರಿನಲ್ಲಿ 1998ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡು ಪೊಲೀಸ್‌ನ ವಿಶೇಷ ತನಿಖಾ ವಿಭಾಗ ಎನ್.ಪಿ. ನೂಹು ಆಲಿಯಾಸ್ ಮಾನ್‌ಕಾವು ರಶೀದ್‌ನನ್ನು ಕೇರಳದ ಕೊಝಿಕೋಡ್‌ನಿಂದ ಸೋಮವಾರ ಬಂಧಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಖಚಿತ ಮಾಹಿತಿಯ ಆಧಾರದಲ್ಲಿ ನೂಹುನನ್ನು ಬಂಧಿಸಲಾಯಿತು. ಆತ ಕಳೆದ 20 ವರ್ಷ ವಿದೇಶದಲ್ಲಿ ಅಡಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನನ್ನು ನ್ಯಾಯಾಲಯ ‘ಘೋಷಿತ ಅಪರಾಧಿ’ ಎಂದು ಪ್ರಕಟಿಸಿದೆ.

ನೂಹುನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. 1998 ಫೆಬ್ರವರಿ 14ರಂದು ಬಿಜೆಪಿಯ ಹಿರಿಯ ನಾಯಕ ಹಾಗೂ ಆಗಿನ ಪಕ್ಷದ ಅಧ್ಯಕ್ಷ ಎಲ್.ಕೆ. ಅಡ್ವಾಣಿ ಕೋಯಂಬತ್ತೂರು ಕೈಗಾರಿಕಾ ನಗರಕ್ಕೆ ಭೇಟಿ ನೀಡುತ್ತಿರುವ ಸಂದರ್ಭ ಕಾಕತಾಳೀಯವಾಗಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಇದರಿಂದ 58 ಜನರು ಸಾವನ್ನಪ್ಪಿದ್ದರು ಹಾಗೂ 200 ಮಂದಿ ಗಾಯಗೊಂಡಿದ್ದರು. ಬಾಂಬ್ ಸ್ಫೋಟಿಸಿದ ಸ್ಥಳದಲ್ಲಿ ಅಡ್ವಾಣಿ ಅವರ ಚುನಾವಣಾ ಪ್ರಚಾರ ಸಭೆ ಆಯೋಜಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News