ಮುಂಗಾರು ಬೆಳೆ ಸಮೀಕ್ಷೆ ಯೋಜನೆ ಸಮಿತಿ ರಚನೆಗೆ ಸರಕಾರದ ಅನುಮೋದನೆ

Update: 2018-09-11 17:10 GMT

ಬೆಂಗಳೂರು, ಸೆ 11: ಮುಂಗಾರು ಬೆಳೆ 2018ರ ಬೆಳೆ ಸಮೀಕ್ಷೆ ಯೋಜನೆಯನ್ನು ಜಿಲ್ಲಾಧಿಕಾರಿಗಳ ನೇರ ಉಸ್ತುವಾರಿಯಲ್ಲಿ ಮತ್ತು ಗ್ರಾಮದಲ್ಲಿ ಲಭ್ಯವಿರುವ ಮಾಹಿತಿ ತಂತ್ರಜ್ಞಾನ ಬಗ್ಗೆ ತಿಳುವಳಿಕೆ ಇರುವ ಯುವಕರ ಸೇವೆಯನ್ನು (ಖಾಸಗಿ ನಿವಾಸಿ) ಬಳಸಿಕೊಳ್ಳುವುದರ ಮೂಲಕ ಅನುಷ್ಠಾನಗೊಳಿಸಲು ಸರಕಾರ ಅನುಮೋದನೆ ನೀಡಿದೆ.

ಬೆಳೆ ಸಮೀಕ್ಷೆ ಯೋಜನೆಯಡಿ ಸಂಗ್ರಹವಾಗುವ ಮಾಹಿತಿಯನ್ನು ಹಲವು ಚಟುವಟಿಕೆಗಳಿಗೆ ಬಳಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು. ಸಾಂಖ್ಯಿಕ ಇಲಾಖೆ, ಕೃಷಿ ಮತ್ತು ತೋಟಗಾರಿಕೆಗಳ ಬೆಳೆ ವಿಸ್ತೀರ್ಣ ಎಣಿಕಾ ಕಾರ್ಯದಲ್ಲಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಹಾಯಧನ ನೀಡಲು, ಬೆಳೆ ವಿಮೆ ಯೋಜನೆಯಡಿ ಪ್ರದೇಶ ಕಡಿತ ಅಂಶವನ್ನು ಅಳವಡಿಸಲು, ಕನಿಷ್ಠ ಬೆಂಬಲ ಬೆಲೆ ನಿಗದಿಗಾಗಿ, ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಫಲಾನುಭವಿ ಯೋಜನೆಗಳ ಅನುಷ್ಠಾನ ಒಳಗೊಂಡಿದೆ.

ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯ ಮತ್ತು ಇ-ಆಡಳಿತ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಸಹ-ಅಧ್ಯಕ್ಷತೆಯಲ್ಲಿ ರಚಿಸಲಾಗುವ ಕಾರ್ಯದರ್ಶಿಗಳ ಸಮಿತಿಯು ಈ ಮಾಹಿತಿಯನ್ನು ಸರಕಾರದ ಇತರೆ ಉದ್ದೇಶಗಳಿಗೆ ಬಳಸುವ ಬಗ್ಗೆ ತೀರ್ಮಾನಿಸಿದಂತೆ ಉಪಯೋಗಿಸಲಾಗುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News