ಸಾಲ ಬಾಧೆ: ರೈತ ಆತ್ಮಹತ್ಯೆಗೆ ಶರಣು

Update: 2018-09-11 18:07 GMT

ಶಿವಮೊಗ್ಗ, ಸೆ. 11: ಸಾಲ ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರೈತರೋರ್ವರು ಜಮೀನಿನಲ್ಲಿಯೇ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಚಿಕ್ಕಜೋಗಿಹಳ್ಳಿ ಗ್ರಾಮದ ನಿವಾಸಿ ಉಜನಿ (34) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಇವರ ತಂದೆ ಕಳೆದ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದು, ಅವರು ಬ್ಯಾಂಕ್ ಹಾಗೂ ಸಹಕಾರಿ ಸಂಘಗಳಲ್ಲಿ ಲಕ್ಷಾಂತರ ರೂ. ಸಾಲ ಮಾಡಿದ್ದರು. 

ತಂದೆಯ ಹೆಸರಿನಲ್ಲಿದ್ದ ಸಾಲ ಮರು ಪಾವತಿ ಮಾಡುವಂತೆ ಹಣಕಾಸು ಸಂಸ್ಥೆಯವರು ನೋಟೀಸ್ ನೀಡಿದ್ದರು. ಸಾಲ ಮರು ಪಾವತಿಸಲು ಸಾಧ್ಯವಾಗದ ಉಜನಿಯವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News