ಇಂಗ್ಲೆಂಡ್‌ನಲ್ಲಿ ಶತಕ ದಾಖಲಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಪಂತ್

Update: 2018-09-11 18:17 GMT

ಲಂಡನ್, ಸೆ.11: ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ ಯುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಶತಕ ದಾಖಲಿಸುವ ಮೂಲಕ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಶತಕ ದಾಖಲಿಸಿದ ಭಾರತದ ಮೊದಲ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

  ಉತ್ತರಾಖಂಡ್‌ನ 20ರ ಹರೆಯದ ಪಂತ್ 117 ಎಸೆತಗಳಲ್ಲಿ, 14 ಬೌಂಡರಿ ಮತ್ತು 3 ಸಿಕ್ಸರ್‌ಗಳ ನೆರವಿನಿಂದ ಚೊಚ್ಚಲ ಶತಕ ಪೂರ್ಣಗೊಳಿಸಿದರು. 73.5ನೇ ಓವರ್‌ನಲ್ಲಿ ರಶೀದ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಪಂತ್ ಶತಕ ಪೂರೈಸಿದರು. ಐದನೇ ಶತಕ ದಾಖಲಿಸಿರುವ ಲೋಕೇಶ್ ರಾಹುಲ್ ಅವರ ಜೊತೆ ಪಂತ್ ಟೀಮ್ ಇಂಡಿಯಾದ ಗೆಲುವಿಗೆ ಹೋರಾಟ ಮುಂದುವರಿಸಿ 204 ರನ್‌ಗಳ ಜೊತೆಯಾಟ ನೀಡಿದರು. ಈ ಹಿಂದೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 92 ರನ್ ಗಳಿಸಿರುವುದು ಓವಲ್‌ನಲ್ಲಿ ಭಾರತದ ವಿಕೆಟ್ ಕೀಪರ್ ಟೆಸ್ಟ್‌ನಲ್ಲಿ ದಾಖಲಿಸಿದ ಗರಿಷ್ಠ ಸ್ಕೋರ್ ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News