ಹೋರಾಟಗಾರರ ಗೃಹಬಂಧನ ಅವಧಿ ವಿಸ್ತರಣೆ

Update: 2018-09-12 17:04 GMT

ಹೊಸದಿಲ್ಲಿ, ಸೆ.12: ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಐವರು ಸಾಮಾಜಿಕ ಕಾರ್ಯಕರ್ತರ ಗೃಹಬಂಧನದ ಅವಧಿಯನ್ನು ಸುಪ್ರೀಂಕೋರ್ಟ್ ಸೆ.17ರವರೆಗೆ ವಿಸ್ತರಿಸಿದೆ.

ಗೃಹಬಂಧನವನ್ನು ಪ್ರಶ್ನಿಸಿ ಇತಿಹಾಸಜ್ಞೆ ರೋಮಿಲಾ ಥಾಪರ್ ಹಾಗೂ ಇತರ ನಾಲ್ವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಳ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠ , ಅರ್ಜಿದಾರರ ಪ್ರತಿನಿಧಿ ವಕೀಲ ಅಭಿಷೇಕ್ ಸಿಂಘ್ವಿ ಮತ್ತೊಂದು ನ್ಯಾಯಾಲಯದಲ್ಲಿ ವಾದ ಮಾಡುತ್ತಿದ್ದ ಕಾರಣ ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿದೆ.

ಈ ಹಿಂದೆ ನಡೆದ ವಿಚಾರಣೆ ಸಂದರ್ಭ ಮಹಾರಾಷ್ಟ್ರ ಪೊಲೀಸರ ಪ್ರತಿನಿಧಿ ವಕೀಲರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿದಾರರು ಈ ಪ್ರಕರಣಕ್ಕೆ ಸಂಬಂಧಿಸಿದವರಲ್ಲ ಮತ್ತು ಅವರನ್ನು ಕ್ರಿಮಿನಲ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಬಿಡಬಾರದು ಎಂದು ವಾದಿಸಿದರು. ಇದನ್ನು ತೀವ್ರವಾಗಿ ವಿರೋಧಿಸಿದ ಅರ್ಜಿದಾರರ ಪರ ವಕೀಲರು, ಸಂತ್ರಸ್ತರ ಕುಟುಂಬದವರೂ ಅಫಿದಾವಿತ್ ಸಲ್ಲಿಸಿದ್ದು, ಇದನ್ನು ಗೃಹಬಂಧನದಲ್ಲಿರುವ ಕಾರ್ಯಕರ್ತರೇ ಸಲ್ಲಿಸಿರುವ ಅರ್ಜಿ ಎಂದು ಪರಿಗಣಿಸಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News