ಮೂಡುಬಿದಿರೆ: ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Update: 2018-09-12 11:00 GMT

ಮೂಡುಬಿದಿರೆ, ಸೆ. 12: ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬೆಂಗಳೂರು ಮೂಲದ ವಿನೂತ (18) ಎಂದು ಗುರುತಿಸಲಾಗಿದೆ.

ಆಕೆ ಹಾಸ್ಟೆಲ್ ರೂಮಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಥಮ ಪಿಯುಸಿಯಲ್ಲಿ ಶೇ. 98 ಅಂಕ ಪಡೆದಿದ್ದಳು. 

ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News