ಮಂಗಳೂರು: ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

Update: 2018-09-12 12:18 GMT

ಮಂಗಳೂರು, ಸೆ.12: ನಗರದ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಮಂಗಳವಾರ ವಿಜೃಂಭಣೆಯಿಂದ ಆಚರಿಸಿದರು. ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಆಗಮಿಸಿ ಮತನಾಡಿದ ಯೆನೆಪೊಯ ವೈದ್ಯಕೀಯ ಕಾಲೇಜಿನ ಅನಸ್ಥೇಶಿಯೋಲಜಿ ವಿಭಾಗದ ಮುಖ್ಯಸ್ಥ ಡಾ.ಪದ್ಮನಾಭ, ಜವಾಬ್ದಾರಿಯುತ ನಾಗರಿಕರನ್ನು ಹೊರತರುವ ನಿಟ್ಟಿನಲ್ಲಿ ಶಿಕ್ಷಣದ ಮಹತ್ವವನ್ನು ತಿಳಿಸಿದರು. ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ಸಲಹೆ ನೀಡಿದರು.

ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ಪ್ರೊ.ಎಚ್.ಶಿವಾನಂದ ಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಡಾ.ದಯಾನಂದ ನಾಯ್ಕಾ ಭಾಗವಹಿಸಿದ್ದರು. ಮೀನುಗಾರಿಕಾ ಮಹಾವಿದ್ಯಾಲಯದ ಸಿಬ್ಬಂದಿ ಸಲಹೆಗಾರರಾದ ಡಾ. ಸುರೇಶ್ ಟಿ., ಮನೋಜ್‌ಕುಮಾರ್ ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News