ಪರಿಸರ ಸ್ನೇಹಿ ಗಣೇಶನಿಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ

Update: 2018-09-12 12:42 GMT

ಬೆಂಗಳೂರು, ಸೆ.12: ರಾಜ್ಯದ ಜನತೆಗೆ ಗೌರಿ-ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮೂಲಕ ಪರಿಸರ ಉಳಿಸಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗೆ ಪಿಒಪಿ ಗಣೇಶ ತಯಾರಿಕೆ ಮತ್ತು ಪ್ರತಿಷ್ಠಾಪನೆ ಹೆಚ್ಚುತ್ತಿದ್ದು, ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮನೆಗಳಲ್ಲಿ ಪಿಒಪಿ ಗಣೇಶನ ಬದಲಿಗೆ ಮಣ್ಣಿನ ಗಣೇಶ ಮೂರ್ತಿಗೆ ಆದ್ಯತೆ ನೀಡಿ. ಪರಿಸರ ಮಾಲಿನ್ಯ ತಡೆಯವುದು ನಮ್ಮೆಲ್ಲರ ಕರ್ತವ್ಯವಾಗಲಿ ಎಂದು ಅವರು ಆಶಿಸಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆಯನ್ನು ತಮ್ಮ ತಮ್ಮ ಮನೆಗಳಲ್ಲೇ ನೀರು ತುಂಬಿದ ಬಕೇಟ್‌ನಲ್ಲಿ ಮಾಡಿ, ಆ ನೀರನ್ನು ನಿಮ್ಮ ಮನೆ ಸುತ್ತಲಿನ ಗಿಡಗಳಿಗೆ ಹಾಕಿ. ಆಗ ಪರಿಸರ ಉಳಿಸಬಹುದು ಮತ್ತು ಕೆರೆಗಳ ನೈರ್ಮಲ್ಯ ಕಾಪಾಡಬಹುದು ಎಂದು ಅವರು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News