ಬೆಂಗಳೂರು: ಬೈಕ್ ಕಳವು ಆರೋಪಿಯ ಬಂಧನ

Update: 2018-09-12 13:29 GMT

ಬೆಂಗಳೂರು, ಸೆ.12: ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್‌ಗಳನ್ನು ಕಳವು ಮಾಡಿ ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಡಿ ಧರ್ಮಪುರಿ ಠಾಣಾ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ.

ಆನಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಕುಮಾರಸ್ವಾಮಿ ಲೇಔಟ್, ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವಾರು ಬೈಕ್ ಕಳ್ಳತನ ಮಾಡಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಈತನ ವಶದಲ್ಲಿದ್ದ 10 ಬೈಕ್‌ಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News