ವಿಚಾರಣಾಧೀನ ಖೈದಿಯಿಂದ ಹಲ್ಲೆ: ಪೊಲೀಸ್ ಕಾನ್‌ಸ್ಟೇಬಲ್ ಮೃತ್ಯು

Update: 2018-09-12 14:12 GMT

ಭೋಪಾಲ, ಸೆ.12: ಪೊಲೀಸ್ ಠಾಣೆಯೊಳಗೆ ವಿಚಾರಣಾಧೀನ ಖೈದಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಕಾನ್‌ಸ್ಟೇಬಲ್ ಚಿಕಿತ್ಸೆ ಫಲಿಸದೆ ಬುಧವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಕಳೆದ ರವಿವಾರ ಈ ಘಟನೆ ನಡೆದಿದ್ದು, ಠಾಣೆಯ ಸಿಸಿಟಿವಿಯಲ್ಲಿ ಘಟನೆಯ ದೃಶ್ಯಾವಳಿ ಸೆರೆಯಾಗಿದೆ. ಕುರ್ಚಿಯಲ್ಲಿ ಕುಳಿತಿದ್ದ ಪೊಲೀಸರ ಹಿಂದಿನಿಂದ ಬಂದ ವಿಚಾರಣಾಧೀನ ಖೈದಿ ಗುದ್ದಲಿಯಿಂದ ಇಬ್ಬರು ಪೊಲೀಸರ ತಲೆಗೆ ಹೊಡೆದು ಠಾಣೆಯಿಂದ ಪರಾರಿಯಾಗಿದ್ದಾನೆ. ತಲೆಗೆ ಬಿದ್ದ ಏಟಿನಿಂದ ಇಬ್ಬರೂ ಪ್ರಜ್ಞೆ ತಪ್ಪಿ ಬಿದ್ದಿದ್ದು ಕೆಲ ಸಮಯದ ಬಳಿಕ ವಿಷಯ ಗೊತ್ತಾಗಿದೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಗಾಯಗೊಂಡಿದ್ದ ಒಬ್ಬ ಪೊಲೀಸ್ ಕಾನ್‌ಸ್ಟೇಬಲ್ ಬುಧವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಒಡಿಶಾದಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ, 40 ಕ್ರಿಮಿನಲ್ ಪ್ರಕರಣದಲ್ಲಿ ಒಳಗೊಂಡಿದ್ದ ಆರೋಪಿಯೊಬ್ಬ ಗಂಜಾಂ ಜಿಲ್ಲೆಯ ಭಂಜಾನಗರದ ವಿಶೇಷ ಜೈಲಿನ ಗೋಡೆಗೆ ಕನ್ನ ಕೊರೆದು ತಪ್ಪಿಸಿಕೊಂಡು ಪರಾರಿಯಾಗಿರುವುದಾಗಿ ವರದಿಯಾಗಿದೆ.

ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದ್ದು ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News