ನಾಗರಿಕ ಸಮಿತಿಯಿಂದ ‘ಅರಣ್ಯ ಹುತಾತ್ಮರ ದಿನಾಚರಣೆ’

Update: 2018-09-12 14:18 GMT

ಉಡುಪಿ, ಸೆ.12: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್‌ನಿಂದ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಕುಂಜಿಬೆಟ್ಟು ಶಾರದ ನಗರದ ರಸ್ತೆ ಪಕ್ಕದಲ್ಲಿ ಸಾಲು ಮರದ ರೂಪದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಗಳ ಸ್ಮರಣಾರ್ಥ ಗಿಡಗಳ ನ್ನು ನೆಟ್ಟು ಆಚರಿಸಲಾಯಿತು.

ಪ್ರಕೃತಿಯ ರಕ್ಷಣೆಯಲ್ಲಿ ಅರಣ್ಯ ಸಿಬ್ಭಂದಿಗಳ ಕೊಡುಗೆ ಮತ್ತು ಶ್ರಮವು ಅಮೂಲ್ಯವಾಗಿದ್ದು, ಅರಣ್ಯ ಸಂಪತ್ತಿನ ರಕ್ಷಣೆಯ ಜೊತೆಗೆ ಜೀವ ವೈವಿದ್ಯತೆಯ ರಕ್ಷಣೆ ಸಹ ಅರಣ್ಯ ಇಲಾಖೆಯಿಂದ ನಡೆಯುತ್ತಿದೆ. ಅರಣ್ಯ ರಕ್ಷಣಾ ಕಾರ್ಯಚರಣೆಯಲ್ಲಿ ಸೈನಿಕರಂತೆ ಅದೆಷ್ಟೊ ಅರಣ್ಯಾಧಿಕಾರಿಗಳು, ಅರಣ್ಯ ರಕ್ಷಕರು, ಅರಣ್ಯ ವೀಕ್ಷಕರು ಪ್ರಾಣಾರ್ಪಣೆ ಮಾಡಿದ್ದಾರೆ. ಅವರ ಸ್ಮರಣೆ ಮಾಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಹ ಪರಿಸರ ರಕ್ಷಣೆಯಲ್ಲಿ ತನ್ನನ್ನು ನಿರಂತರವಾಗಿ ತೊಡಗಿಸಿಕೊಂಡಿದೆ. ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಅರಣ್ಯ ಇಲಾಖೆಗೂ ಸಹಕಾರ ನೀಡುತ್ತಿದೆ ಎಂದು ಅರಣ್ಯ ರಕ್ಷಕ ಕೇಶವ ಪೂಜಾರಿ ನುಡಿದರು.

ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಹ ಪರಿಸರ ರಕ್ಷಣೆಯಲ್ಲಿ ತನ್ನನ್ನು ನಿರಂತರವಾಗಿ ತೊಡಗಿಸಿಕೊಂಡಿದೆ. ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಅರಣ್ಯ ಇಲಾಖೆಗೂ ಸಹಕಾರ ನೀಡುತ್ತಿದೆ ಎಂದು ಅರಣ್ಯ ರಕ್ಷಕ ಕೇಶವ ಪೂಜಾರಿ ನುಡಿದರು. ಕಾರ್ಯಕ್ರಮದಲ್ಲಿ ಅರಣ್ಯ ರಕ್ಷಕರಾದ ದೇವರಾಜ್ ಪಾಣ, ನಾಗರಿಕ ಸಮಿತಿ ಸದಸ್ಯ ತಾರಾನಾಥ್ ಮೇಸ್ತ ಶಿರೂರು, ಸುರೇಶ್ ಭಟ್ ಶಾರದ ನಗರ, ಸದಾನಂದ ಪೂಜಾರಿ, ಸುರೇಶ್ ಕುಕ್ಕಿಕಟ್ಟೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News