ಗುಂಪು ಹತ್ಯೆ ಪ್ರಕರಣ: ಬಿಹಾರ ಸರಕಾರಕ್ಕೆ ನೋಟಿಸ್

Update: 2018-09-12 14:30 GMT

ಪಾಟ್ನ, ಸೆ.12: ಶಾಲೆಗೆ ನುಗ್ಗಿ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಲು ಪ್ರಯತ್ನಿಸಿದ ಆರೋಪದಲ್ಲಿ ಮೂವರು ವ್ಯಕ್ತಿಗಳ ಮೇಲೆ ಗುಂಪೊಂದು ದಾಳಿ ನಡೆಸಿ ಅವರನ್ನು ಹತ್ಯೆಗೈದ ಪ್ರಕರಣದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗ(ಎನ್‌ಎಚ್‌ಆರ್‌ಸಿ)ವು ಬಿಹಾರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಮಾಧ್ಯಮದಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿ ಸ್ವಯಂಪ್ರೇರಿತ ದೂರು ದಾಖಲಿಸಿರುವ ಎನ್‌ಎಚ್‌ಆರ್‌ಸಿ, ಇಂತಹ ಪ್ರಕರಣಗಳನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ ಬಿಹಾರ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿದೆ. ತಪ್ಪಿತಸ್ತರ ವಿರುದ್ಧ ಕೈಗೊಂಡಿರುವ ಕ್ರಮ ಹಾಗೂ ಇಂತಹ ಪ್ರಕರಣ ಮರುಕಳಿಸದಂತೆ ತಡೆಯಲು ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವಾಸ್ತವ ವರದಿಯನ್ನು ಆರು ವಾರದೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಶಾಲಾ ಆಡಳಿತ ವರ್ಗದವರು ಕಾನೂನಿನ ಪ್ರಕಾರ ಕಾರ್ಯ ನಿರ್ವಹಿಸಬೇಕಿತ್ತು. ವ್ಯಕ್ತಿಗಳ ಬಗ್ಗೆ ಸಂಶಯವಿದ್ದರೆ ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು. ಆದರೆ ಹೀಗೆ ಮಾಡದೆ, ವ್ಯಕ್ತಿಗಳ ವಿಚಾರಣೆಯನ್ನೂ ನಡೆಸದೆ ಶಂಕೆಯ ಆಧಾರದಲ್ಲಿ ಮೂವರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿರುವುದು ಮೇಲ್ನೊಟಕ್ಕೆ ತಿಳಿದು ಬಂದಿದೆ ಎಂದು ಎನ್‌ಎಚ್‌ಆರ್‌ಸಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News