ಶಿವಮೊಗ್ಗ: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

Update: 2018-09-12 15:37 GMT

ಶಿವಮೊಗ್ಗ, ಸೆ. 12: ಚಲಿಸುವ ರೈಲಿಗೆ ಸಿಲುಕಿ ಅನಾಮಧೇಯ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನಗರದ ಹೊರವಲಯ ಹರಿಗೆ ಬಳಿ ಬುಧವಾರ ಬೆಳಗ್ಗೆ ನಡೆದಿದೆ. 

ಮೃತ ವ್ಯಕ್ತಿಯ ಹೆಸರು, ವಿಳಾಸ ಸೇರಿದಂತೆ ಯಾವುದೆ ಮಾಹಿತಿ ಲಭ್ಯವಾಗಿಲ್ಲ. ಮೃತ ವ್ಯಕ್ತಿ ಸುಮಾರು 40 ವರ್ಷ ಪ್ರಾಯವಾಗಿದ್ದು, 5.2 ಅಡಿ ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಕೊರಳಲ್ಲಿ ಲಿಂಗದ ಕಾಯಿಯ ಸರವಿದೆ. 

ಕಪ್ಪು-ಬಿಳಿ ಬಣ್ಣದ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ರೌಂಡ್ ನೆಕ್ ಟೀ ಶರ್ಟ್, ನೀಲಿ-ಹಳದಿ-ಬಿಳಿ ಬಣ್ಣದ ಚೆಕ್ಸ್ ಪಂಚೆ ತೊಟ್ಟಿದ್ದಾರೆ. ಶವವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈಲ್ವೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 08182-222974 ಗೆ ಸಂಪರ್ಕಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News