ಹೊರದೇಶಗಳಲ್ಲಿ ದುಡಿಯುವ ಅಶಿಕ್ಷಿತ ಕಾರ್ಮಿಕರ ಕುರಿತು ಕಾರ್ಯಾಗಾರ

Update: 2018-09-12 16:15 GMT

ಉಡುಪಿ, ಸೆ.12: ಹೊರ ದೇಶಗಳಲ್ಲಿ ದುಡಿಯುತ್ತಿರುವ ಅವಿದ್ಯಾವಂತ ಕಾರ್ಮಿಕರ ಹಿತರಕ್ಷಣೆಯಲ್ಲಿ ಸಂಘಸಂಸ್ಥೆಗಳ ಹಾಗೂ ಸರಕಾರಿ ಅಧಿಕಾರಿಗಳ ಪಾತ್ರ ಎಂಬ ವಿಷಯದ ಕುರಿತು ಕಾರ್ಯಾಗಾರವೊಂದು ಸೆ.18ರಂದು ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಬೆಳಗ್ಗೆ 10:30ಕ್ಕೆ ನಡೆಯಲಿದೆ.

ಉಡುಪಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳು ಭಾಗವಹಿಸಲಿದ್ದು, ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ ಶಾನ್‌ಭಾಗ್ ಅವರು ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಾಗಾರದಲ್ಲಿ ಹೊರ ದೇಶದಲ್ಲಿ ಉದ್ಯೋಗ ಪಡೆದಿರುವವರು ಹಾಗೂ ಉದ್ಯೋಗ ಆಕಾಂಕ್ಷಿಗಳು ಮತ್ತು ಆಸಕ್ತ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅನಿವಾಸಿ ಭಾರತೀಯರ ಹಿತರಕ್ಷಣಾ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕರಾದ ಕುಂದಾಪುರ ಸಹಾಯಕ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News