ಇಂಗ್ಲೆಂಡ್ ವಿರುದ್ಧ ಸೋತರೂ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ, ಕೊಹ್ಲಿ ನಂ.1

Update: 2018-09-12 18:20 GMT

ಲಂಡನ್, ಸೆ.12: ಇಂಗ್ಲೆಂಡ್ ವಿರುದ್ಧ ನಡೆದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ 1-4 ಅಂತರದಲ್ಲಿ ಸೋಲನುಭವಿಸಿದ್ದರೂ ಅಂಕಪಟ್ಟಿಯಲ್ಲಿ ಟೀಂ ಇಂಡಿಯಾ ಅಗ್ರಸ್ಥಾನ ಉಳಿಸಿಕೊಂಡಿದೆ. ನಾಯಕ ವಿರಾಟ್ ಕೊಹ್ಲಿ ಈಗಲೂ ಅಗ್ರಸ್ಥಾನದಲ್ಲಿದ್ದಾರೆ. ಆದರೆ ಈ ಸರಣಿ ಸೋಲಿನಿಂದ ಭಾರತದ ಅಂಕ 125ರಿಂದ 115ಕ್ಕೆ ಇಳಿದಿದೆ. ಸರಣಿಯ ಆರಂಭಕ್ಕೂ ಮುನ್ನ 97 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ಟೀಂ ಇಂಡಿಯಾ ವಿರುದ್ಧ ಗಳಿಸಿದ ಸರಣಿ ಗೆಲುವಿನಿಂದಾಗಿ ಎಂಟು ಅಂಕಗಳನ್ನು ಪಡೆದುಕೊಂಡಿದ್ದು ನಾಲ್ಕನೇ ಸ್ಥಾನಕ್ಕೆ ಏರಿದೆ. ಸದ್ಯ ತಲಾ 106 ಅಂಕಗಳನ್ನು ಪಡೆದಿರುವ ದಕ್ಷಿಣ ಆಫ್ರಿಕ ಮತ್ತು ಆಸ್ಟ್ರೇಲಿಯ ಇಂಗ್ಲೆಂಡ್‌ಗಿಂತ ಮೇಲಿನ ಸ್ಥಾನದಲ್ಲಿದೆ. ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದ್ದಾರೆ. ಸರಣಿ ಆರಂಭಕ್ಕೂ ಮೊದಲು ಆಸ್ಟ್ರೇಲಿಯದ ಸ್ಟೀವ್ ಸ್ಮಿತ್ ಅವರಿಂದ 27 ಅಂಕಗಳು ಹಿಂದಿದ್ದ ಕೊಹ್ಲಿ ಸರಣಿ ಮುಗಿಯುವ ಹೊತ್ತಿಗೆ ಸ್ಮಿತ್‌ರಿಂದ ಒಂದು ಅಂಕ ಮೇಲೆ ಸಾಗಿದ್ದಾರೆ. ಇನ್ನು ಲೋಕೇಶ್ ರಾಹುಲ್ ಮತ್ತು ರಿಷಭ್ ಪಂತ್ ಕೂಡಾ ಈ ಸರಣಿಯ ಮೂಲಕ ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ. 19ನೇ ಸ್ಥಾನದಲ್ಲಿದ್ದ ರಾಹುಲ್ 16ನೇ ಸ್ಥಾನಕ್ಕೆ ಜಿಗಿದಿದ್ದರೆ, 111ನೇ ಸ್ಥಾನದಲ್ಲಿದ್ದ ಪಂತ್ 63ನೇ ಸ್ಥಾನಕ್ಕೆ ತಲುಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News